ಭಟ್ಕಳ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಭಟ್ಕಳ ಬಿಜೆಪಿ ಮಂಡಳ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿತು. ಬಿಜೆಪಿಯ ಭರ್ಜರಿ ಗೆಲುವನ್ನು ಸಂಭ್ರಮಿಸಲು ಮಂಡಳದ ವತಿಯಿಂದ ಪಟ್ಟಣದ ಮುಖ್ಯ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ನಡೆಸಲಾಯಿತು. ಕಾರ್ಯಕರ್ತರು ತಮ್ಮ ಸಂತಸವನ್ನು ಹಂಚಿಕೊಂಡು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಂಡಳ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಪ್ರಮುಖರಾದ ರಾಜೇಶ್ ನಾಯ್ಕ, ಸುಬ್ರಾಯ ದೇವಡಿಗ, ಭಾಸ್ಕರ ದೇವಿಮನೆ, ಮೋಹನ ನಾಯ್ಕ, ಸುಬ್ರಾಯ ನಾಯ್ಕ, ವೆಂಕಟೇಶ ನಾಯ್ಕ, ಶ್ರೀಕಾಂತ ನಾಯ್ಕ, ಶ್ರೀನಿವಾಸ ನಾಯ್ಕ, ಕೇಶವ ನಾಯ್ಕ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
Kshetra Samachara
04/05/2026 10:40 pm
LOADING...