ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

151 ದಂಪತಿಗಳಿಗೆ ಉಚಿತ ಸಾಮೂಹಿಕ ವಿವಾಹ

ರಾಯಚೂರು : ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಬಸನಗೌಡ ಫೌಂಡೇಶನ್ ವತಿಯಿಂದ ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ 151 ದಂಪತಿಗಳಿಗೆ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು..

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್, ಹಾಗೂ ಹಲವು ಸಚಿವರು ಹಾಗೂ ನಾಡಿನ ಹರ ಗುರು ಚರ ಮೂರ್ತಿಗಳು ನವ ಜೋಡಿಗಳಿಗೆ ಶುಭ ಹಾರೈಸಿದರು. ಡಿಕೆ ಶಿವಕುಮಾರ್ ಮತ್ತು ಕಿಚ್ಚ ಸುದೀಪ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ 5,001 ಜನ ತಾಯಂದಿರಿಗೆ ಉಡಿ ತುಂಬುವ ಮೂಲಕ ಸ್ತ್ರೀಶಕ್ತಿಗೂ ಗೌರವ ಸಲ್ಲಿಸಲಾಯಿತು.

ಇದೇ ವೇಳೆ ಬಸನಗೌಡ ಬಾದರ್ಲಿ ವಿಧಾನ ಪರಿಷತ್ ಶಾಸಕರಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜನಪರ ಸಾಧನೆಗಳ ಕೈಪಿಡಿ ಅನಾವರಣಗೊಳಿಸಲಾಯಿತು.

Edited By :
PublicNext

PublicNext

05/05/2026 07:47 am

Cinque Terre

9.16 K

Cinque Terre

0