ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಕ್ಷಣಾರ್ಧದಲ್ಲಿ ಪಲ್ಲಕ್ಕಿ ಬಸ್ ಭಸ್ಮ, ಬೆಂಕಿಯ ಕೆನ್ನಾಲಿಗೆಗೆ ಬಲಿ!

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಸಾರಿಗೆ ಇಲಾಖೆಯ ಪಲ್ಲಕ್ಕಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ನೋಡ ನೋಡುತ್ತಿದ್ದಂತೆಯೇ ಬಸ್ ಧಗಧಗನೆ ಹೊತ್ತಿ ಉರಿದು ಅಗ್ನಿಗಾಹುತಿಯಾಗಿದೆ.

ಚಾಲಕನ ಸಮಯಪ್ರಜ್ಞೆಯಿಂದ ಪಾರಾದ ಜೀವಗಳು

ದೇವರಗುಡ್ಡ ಗ್ರಾಮದ ಬಳಿ ಸಾಗುತ್ತಿದ್ದಾಗ ಬಸ್‌ನಿಂದ ಹೊಗೆ ಕಾಣಿಸಿಕೊಂಡು ನಂತರ ಬೆಂಕಿ ಹೊತ್ತಿಕೊಂಡಿದೆ. ಈ ಕೂಡಲೇ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ, ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಲು ಸೂಚಿಸಿದ್ದಾರೆ. ಚಾಲಕನ ಸಮಯಪ್ರಜ್ಞೆ ಮತ್ತು ಜಾಗೃತಿಯಿಂದಾಗಿ ಬಸ್‌ನಲ್ಲಿದ್ದ 17 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Edited By :
PublicNext

PublicNext

05/05/2026 08:55 am

Cinque Terre

13.5 K

Cinque Terre

0

ಸಂಬಂಧಿತ ಸುದ್ದಿ