ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಮುಳಬಾಗಿಲಿನಲ್ಲಿ ಮಣ್ಣು ದಂಧೆಗೆ ಬ್ರೇಕ್! - ತಹಶೀಲ್ದಾರ್ ದಿಢೀರ್ ಕಾರ್ಯಾಚರಣೆ

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಇತ್ತೀಚೆಗೆ ಅಕ್ರಮ ಮಣ್ಣು ಸಾಗಾಣಿಕೆ ಪ್ರಕರಣ ಹೆಚ್ಚುತ್ತಿದೆ. ಅಕ್ರಮವಾಗಿ ಕೆರೆ ಮಣ್ಣು ಸಾಗಿಸ್ತಿದ್ದ ವೇಳೆ ಮುಳಬಾಗಿಲು ತಹಶೀಲ್ದಾರ್ ಗೀತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಮುಳಬಾಗಿಲು ತಾಲೂಕಿನ ಕಾಶಿಪುರ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಸರ್ವೇ ನಂಬರ್ 55 ರ ಕೆರೆಯಲ್ಲಿ ಜೆಸಿಬಿ ಹಾಗೂ ಟ್ರಾಕ್ಟರ್ ಬಳಕೆ ಮಾಡ್ತಿರುವ ವೇಳೆ ತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿ ಕೆರೆಗೆ ಭೇಟಿ ನೀಡಿ ಮಣ್ಣು ಗಣಿಗಾರಿಕೆ ನಡೆಸ್ತಿದ್ದ ಒಂದು ಜೆಸಿಬಿ ಮತ್ತು 2 ಟ್ರಾಕ್ಟರ್ ಅನ್ನು ವಶಕ್ಕೆ ಪಡೆದು, ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Edited By :
PublicNext

PublicNext

05/05/2026 09:04 am

Cinque Terre

10.26 K

Cinque Terre

0