ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಗಾಂಜಾ ಸೇವನೆ - ಇಬ್ಬರನ್ನ‌ ಬಂಧಿಸಿದ ಪೊಲೀಸರು

ಶಿವಮೊಗ್ಗ: ನಗರದ ಖಾಸಗಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಇಬ್ಬರನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿ ಸಂದೀಪ್.ಎಸ್.ಡಿ. ಹಾಗೂ ಚಂದ್ರನಾಯಕ್.ಪಿ ಅವರು ಗಸ್ತು ಕರ್ತವ್ಯದಲ್ಲಿದ್ದಾಗ ಈ ಕಾರ್ಯಾಚರಣೆ ನಡೆಸಿದ್ದಾರೆ.

ಮೊದಲ ಪ್ರಕರಣದಲ್ಲಿ ಆರ್.ಎಂ.ಎಲ್ ನಗರದ ರಾಹುಲ್ ಶೆಟ್ಟಿ (25) ಎಂಬಾತನನ್ನು ಬಂಧಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಸೂಳೆಬೈಲು ನಿವಾಸಿ, ಪೇಂಟಿಂಗ್ ಕೆಲಸ ಮಾಡುವ ಚಾಂದ್ ಪಾಷಾ (38) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರಿಬ್ಬರೂ ಮಾದಕ ವಸ್ತುವಿನ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುವ ಸಾಧ್ಯತೆ ಇತ್ತು. ಈ ಹಿನ್ನೆಲೆ ಇಬ್ಬರು ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಇಬ್ಬರೂ ಗಾಂಜಾ ಸೇವಿಸಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಮಾದಕ ವಸ್ತು ನಿಯಂತ್ರಣ ಕಾಯ್ದೆ ಅಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
PublicNext

PublicNext

05/05/2026 11:23 am

Cinque Terre

2.24 K

Cinque Terre

0

ಸಂಬಂಧಿತ ಸುದ್ದಿ