ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ನಕಲಿ ಫೆವಿ ಕ್ವಿಕ್‌ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ

ಶಿವಮೊಗ್ಗ: ಗಾಂಧಿ ಬಜಾರ್‌ನ ವಿವಿಧ ಮಳಿಗೆಗಳಲ್ಲಿ ನಕಲಿ ಫೆವಿ ಕ್ವಿಕ್‌ ಮಾರಾಟ ಮಾಡುತ್ತಿದ್ದವರನ್ನು ಪತ್ತೆಹಚ್ಚಲಾಗಿದೆ. ಈ ಹಿನ್ನೆಲೆ ಮೂರು ಮಳಿಗೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಮೆಸರ್ಸ್ ಪಿಡಿಲೈಟ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯ ಪ್ರತಿನಿಧಿ ವಿನೋದ್ ಎಂಬುವವರು ದೂರು ನೀಡಿದ್ದಾರೆ. ಮಾರುಕಟ್ಟೆಯಲ್ಲಿ ಫೆವಿ ಕ್ವಿಕ್ ಉತ್ಪನ್ನದ ನಕಲಿ ಮಾದರಿಗಳನ್ನು ಅಧಿಕೃತ ಟ್ರೇಡ್ ಮಾರ್ಕ್ ಬಳಸಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಗ್ರಾಹಕರು ಮೋಸ ಹೋಗುತ್ತಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಗಾಂಧಿ ಬಜಾರ್‌ನಲ್ಲಿರುವ ಮೂರು ಪ್ರತ್ಯೇಕ ಮಳಿಗೆಗಳಲ್ಲಿ ಇಂತಹ ನಕಲಿ ಉತ್ಪನ್ನಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡಲಾಗುತ್ತಿದೆ. ಇದು ಕಂಪನಿಯ ಗಮನಕ್ಕೆ ಬಂದಿತ್ತು. ಈ ಕೃತ್ಯದಿಂದ ಕಂಪನಿಯ ಘನತೆಗೆ ಧಕ್ಕೆ ಉಂಟಾಗಿದೆ. ಸರ್ಕಾರದ ಆದಾಯಕ್ಕೂ ನಷ್ಟವಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

05/05/2026 11:27 am

Cinque Terre

2.46 K

Cinque Terre

0

ಸಂಬಂಧಿತ ಸುದ್ದಿ