ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಚಾಕು ಇರಿತ ನಡೆಸಿದ ಘಟನೆ ನಗರದ ಎಸ್.ಎಂ. ಕೃಷ್ಣ ನಗರದಲ್ಲಿ ನಡೆದಿದೆ.
21 ವರ್ಷದ ಸಲ್ಮಾನ್ ಮೇಲೆ ಪಕ್ಕದ ಮನೆಯಲ್ಲೇ ವಾಸವಾಗಿರುವ ಸಿಕಂದರ್ ಎಂಬ ಯುವಕ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಸಲ್ಮಾನ್ ನಿರಂತರವಾಗಿ ಮನೆ ಕಡೆ ನೋಡುತ್ತಿದ್ದಾನೆ ಎಂಬ ಕಾರಣಕ್ಕೆ ಸಲ್ಮಾನ್ ಸಿಕಂದರ್ ಅನ್ನು ಪ್ರಶ್ನಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ನಂತರ ಮನೆಗೆ ತೆರಳಿದ ಸಿಕಂದರ್ ಚಾಕು ತಂದು ಏಕಾಏಕಿ ಸಲ್ಮಾನ್ ಮೇಲೆ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ ಸಲ್ಮಾನ್‌ಗೆ ಎದೆ ಹಾಗೂ ಕೈ ಭಾಗ ಸೇರಿ ಮೂರು ಕಡೆಗಳಲ್ಲಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆಯ ವೇಳೆ ಸಿಕಂದರ್‌ಗೂ ಸ್ವಲ್ಪ ಪೆಟ್ಟುಗಳಾಗಿದ್ದು, ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಂತೋಷ್ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/05/2026 12:34 pm
LOADING...