ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕರಾವಳಿ ಕಲೋತ್ಸವಕ್ಕೆ ಚಾಲನೆ, ಪೂರ್ವಭಾವಿಯಾಗಿ ಜಾನಪದ ದಿಬ್ಬಣ ಮೆರವಣಿಗೆ

ಮಂಗಳೂರು: ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಮತ್ತು ಚಿಣ್ಣರ ಲೋಕ ಸೇವಾ ಬಂಧು ಬಂಟ್ವಾಳ ಜಂಟಿ‌ ನೇತೃತ್ವದಲ್ಲಿ ಬಿಸಿರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಕರಾವಳಿ ಕಲೋತ್ಸವಕ್ಕೆ ಚಾಲನೆ ಸಿಕ್ಕಿತು. ಪೂರ್ವಭಾವಿಯಾಗಿ ಜಾನಪದ ದಿಬ್ಬಣ ಮೆರವಣಿಗೆ ಬಿ.ಸಿ.ರೋಡ್ ನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಸಭಾಂಗಣದಿಂದ ಸ್ಪರ್ಶಾ ಕಲಾ ಮಂದಿರಕ್ಕೆ ಸಾಗಿ ಬಂತು. ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಚಾಲನೆ ನೀಡಿದರು. ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಮುಖ್ಯ ಅತಿಥಿಯಾಗಿದ್ದರು.

ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ್ ಜೈನ್ ಪಂಜಿಕಲ್ಲು, ತುಳು ಸಾಹಿತ್ಯ ಸಂಭ್ರಮದ ಅಧ್ಯಕ್ಷ ಬೇಬಿ ಕುಂದರ್, ಕಲೋತ್ಸವದ ಸ್ಥಾಪಕಾಧ್ಯಕ್ಷ ಮೋಹನ್ ದಾಸ ಕೊಟ್ಟಾರಿ ಮುನ್ನೂರು, ಆಡಳಿತ ಟ್ರಸ್ಟಿ ತೇವು ತಾರಾನಾಥ ಕೊಟ್ಟಾರಿ ಸಹಿತ ಹಲವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮಹಿಳೆಯರಿಗೆ ಸೀರೆ ನಡಿಗೆ ಸ್ಪರ್ಧೆಗೆ ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಸ್ಪರ್ಶ ಕಲಾ ಮಂದಿರದಲ್ಲಿ ಕಲೋತ್ಸವಕ್ಕೆ ಚಾಲನೆ ದೊರೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕಲೋತ್ಸವ ಅಧ್ಯಕ್ಷ ಸುದರ್ಶನ ಜೈನ್, ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ರೋಟರಿ ಮಾಜಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ, ಪ್ರಮುಖರಾದ ಪಿಯೂಸ್ ಎಲ್. ರೋಡ್ರಿಗಸ್, ಸೀತಾರಾಮ ಶೆಟ್ಟಿ ಕಾಂತಾಡಿಗುತ್ತು, ಉಮೇಶ್ ಕುಮಾರ್ ವೈ, ಬ್ಯಾರಿ ಸಾಹಿತ್ಯ ಸಂಭ್ರಮ ಅಧ್ಯಕ್ಷ ರಝಾಕ್ ಕುಕ್ಕಾಜೆ ಮತ್ತಿತರರು ಹಾಜರಿದ್ದರು.

Edited By :
Kshetra Samachara

Kshetra Samachara

05/05/2026 01:00 pm

Cinque Terre

4.13 K

Cinque Terre

0

ಸಂಬಂಧಿತ ಸುದ್ದಿ