ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಖಂಡಿಸಿ ಶಿರಸಿಯ ಬಿಸಿಲಕೊಪ್ಪ ಬಳಿ ಬೃಹತ್ 'ಮಾಡು ಇಲ್ಲವೆ ಮಡಿ' ಪ್ರತಿಭಟನೆ ಆರಂಭಗೊಂಡಿದೆ. ನೂರಾರು ಸಂಖ್ಯೆಯಲ್ಲಿ ಸೇರಿರುವ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಸ್ಪಷ್ಟ ಭರವಸೆ ನೀಡುವವರೆಗೂ ಜಾಗದಿಂದ ಒಂದಿಂಚೂ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ವಿಭಿನ್ನ ಮತ್ತು ಸಂಕೇತಿಕ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ. ರಸ್ತೆ ಮಧ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯ ಭಾವಚಿತ್ರಕ್ಕೆ ಹೂಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಹೋರಾಟಕ್ಕೆ ಚಾಲನೆ ನೀಡಲಾಯಿತು. ಈ ಮೂಲಕ ಹೆದ್ದಾರಿ ಯೋಜನೆ ತಮ್ಮ ಪಾಲಿಗೆ "ಸತ್ತುಹೋಗಿದೆ" ಎಂಬ ಸಂದೇಶ ರವಾನಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ್ ನಾಯ್ಕ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಶಾಸಕರಾದ ಭೀಮಣ್ಣ ಟಿ. ನಾಯ್ಕ ಮತ್ತು ಶಿವರಾಮ ಹೆಬ್ಬಾರ್ ಸೇರಿದಂತೆ ಅನೇಕ ಪ್ರಮುಖ ಮುಖಂಡರು ಕೈಜೋಡಿಸುವ ನಿರೀಕ್ಷೆಯಿದೆ.
PublicNext
05/05/2026 02:43 pm
LOADING...