ಧಾರವಾಡ: ಬಿಜೆಪಿ ನಾಯಕರು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ವಿಷಯದಲ್ಲಿ ಯೂಟರ್ನ್ ನೀತಿ ಅನುಸರಿಸುತ್ತಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಇಮ್ರಾನ್ ಎಲಿಗಾರ ತಿಳಿಸಿದರು.
ಧಾರವಾಡ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸರ್ವಾನುಮತದಿಂದ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಆಗಬೇಕು ಎಂದು ಠರಾವು ಪಾಸು ಮಾಡಲಾಗಿತ್ತು. ರಾಜ್ಯ ಸರ್ಕಾರ ಸಹ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಆದರೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಆಡಳಿತದಲ್ಲಿರುವ ಬಿಜೆಪಿ ಇದೀಗ ಬೃಹತ್ ಮಹಾನಗರ ಪಾಲಿಕೆ ನೆಪವೊಡ್ಡಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಹುಬ್ಬಳ್ಳಿಯಲ್ಲಿ ನಡೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಬೃಹತ್ ಮಹಾನಗರ ಪಾಲಿಕೆ ರಚನೆ ಆಗಬೇಕು ಎಂದು ಠರಾವು ಚರ್ಚೆ ಮಾಡದೇ ತರಾತುರಿಯಲ್ಲಿ ಪಾಸು ಮಾಡಿದ್ದಾರೆ. ಜನರಿಂದ ಆಯ್ಕೆಯಾದ ಬಿಜೆಪಿ ಮಹಾನಗರ ಪಾಲಿಕೆ ಸದಸ್ಯರು ಧಾರವಾಡ ಪ್ರತ್ಯೇಕ ಮಹಾನಗರ ವಿರೋಧ ಮಾಡಿ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಎಲ್ಲಾ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕರು ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಒದಗಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತೇವೆ. ತೀವ್ರ ವಿರೋಧದ ನಡುವೆ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಬದಲು ಬೃಹತ್ ಮಹಾನಗರ ಪಾಲಿಕೆ ಠರಾವು ಪಾಸು ಮಾಡಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯ ರಾಜಶೇಖರ ಕಮತಿ, ಕವಿತಾ ಕಬ್ಬೇರ, ದೀಪಾ ನೀರಲಕಟ್ಟಿ, ಶಂಭು ಸಾಲಿಮನಿ, ತುಳಜಪ್ಪ ಪೂಜಾರ ಇದ್ದರು.
Kshetra Samachara
05/05/2026 03:23 pm
LOADING...