ಚೆನ್ನೈ: ಕಾಲಿವುಡ್ ಸೂಪರ್ ಸ್ಟಾರ್, 'ದಳಪತಿ' ವಿಜಯ್ ತಮ್ಮ ರಾಜಕೀಯ ಜೀವನದ ಮೊದಲ ಹೆಜ್ಜೆಯಲ್ಲೇ ಸಿಕ್ಕ ಅಭೂತಪೂರ್ವ ಯಶಸ್ಸನ್ನು ಅತ್ಯಂತ ಅರ್ಥಪೂರ್ಣವಾಗಿ ಸಂಭ್ರಮಿಸಿದ್ದಾರೆ. ತಮ್ಮ ರಾಜಕೀಯ ಪಕ್ಷ 'ತಮಿಳಗ ವೆಟ್ರಿ ಕಳಗಂ' (TVK) ಸ್ಥಾಪಿಸಿ, ಸಾರ್ವಜನಿಕ ರಂಗದಲ್ಲಿ ಸಕ್ರಿಯರಾದ ಬೆನ್ನಲ್ಲೇ ವಿಜಯ್ ಅವರು ತಮ್ಮ ತಂದೆ-ತಾಯಿಯನ್ನು ಭೇಟಿಯಾಗಿ ಸಂಭ್ರಮ ಹಂಚಿಕೊಂಡಿದ್ದಾರೆ.
ನಟ ವಿಜಯ್ ತಮ್ಮ ತಂದೆ, ಖ್ಯಾತ ನಿರ್ದೇಶಕ ಎಸ್.ಎ. ಚಂದ್ರಶೇಖರ್ ಮತ್ತು ತಾಯಿ ಶೋಭಾ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆಶೀರ್ವಾದ ಪಡೆದಿದ್ದಾರೆ. ಈ ಭೇಟಿಯ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ರಾಜಕೀಯ ಅಖಾಡಕ್ಕೆ ಇಳಿದ ನಂತರ ವಿಜಯ್ ಮತ್ತು ಅವರ ತಂದೆಯ ನಡುವೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿಗಳಿಗೂ ಈ ಭೇಟಿ ಫುಲ್ ಸ್ಟಾಪ್ ಇಟ್ಟಿದೆ.
PublicNext
05/05/2026 05:26 pm
LOADING...