ಚಾಮರಾಜನಗರ : ಕೋವಿಡ್ ಸಂದರ್ಭದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗಿರುವ ದುರಂತ. ಇದು ಮಾನವ ಸೃಷ್ಟಿಯಿಂದ ನಡೆದ ದುರಂತ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದರು.ಚಾಮರಾಜನಗರದಲ್ಲಿ ಆಕ್ಸಿಜನ್ ದುರ್ಘಟನೆಯ ಸಂತ್ರಸ್ತರೊಂದಿಗೆ ನಡೆದ ಕುಟುಂಬ ಸಮ್ಮಿಲನ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಅಧಿಕಾರಿಗಳು ಮುತುವರ್ಜಿ ವಹಿಸಿದ್ದರೆ ಈ ದುರಂತ ಆಗುತ್ತಿರಲಿಲ್ಲ.
ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಬೇಕು. ಈ ಸಂಬಂಧ ನ್ಯಾಯಮೂರ್ತಿಗಳು ಸರ್ಕಾರಕ್ಕೆ ಸಲ್ಲಿಸಿರುವ ವರದಿ ಬಹಿರಂಗವಾಗಬೇಕು. ತಪ್ಪಿತಸ್ಥರ ವಿರುದ್ಧ ಸಿಎಂ, ಡಿಸಿಎಂ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
Kshetra Samachara
05/05/2026 05:29 pm
LOADING...