ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ಜೀವನದಲ್ಲಿ ಸಾರ್ಥಕ 50 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಮೇ 9 ರಂದು ಚಿತ್ರದುರ್ಗದಲ್ಲಿ 'ಬಿ.ಎಸ್.ವೈ ಅಭಿಮಾನೋತ್ಸವ' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.
ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಸಾಕಷ್ಟು ಶ್ರಮವಹಿಸಿದ್ದಾರೆ. ಅವರು ದೃಢ ಸಂಕಲ್ಪದೊಂದಿಗೆ ಒಳ್ಳೆಯ ಕೆಲಸ ಮಾಡುವ ಮೂಲಕ ರೈತಪರವಾದಂತಹ ಕಾರ್ಯ ಮಾಡುವುದರ ಜೊತೆಗೆ ಮನೆ ಮಾತಾಗಿದ್ದಾರೆ. ಈ ಪಕ್ಷಾತೀತ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಕೇಂದ್ರದ ಸಚಿವರುಗಳು, ಸಂಸದರು 500 ಕ್ಕೂ ಹೆಚ್ಚು ಮಠಾಧೀಶರುಗಳು, ಬೇರೆ ಬೇರೆ ಪಕ್ಷದ ಮುಖಂಡರುಗಳು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಬೃಹತ್ ಕಾರ್ಯಕ್ರಮಕ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/05/2026 05:46 pm
LOADING...