ಶಿವಮೊಗ್ಗ : ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅಣು ವಿದ್ಯುತ್ ಸ್ಥಾವರವನ್ನು ಪರಿಸರಕ್ಕಾಗಿ ನಾವು ಮತ್ತು ರಾಷ್ಟ್ರಭಕ್ತರ ಬಳಗ ತೀವ್ರವಾಗಿ ವಿರೋಧಿಸಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶವಾದ ಈ ಭಾಗದಲ್ಲಿ ಭೂಮಿಯಲ್ಲಿ ಬೃಹತ್ ಯೋಜನೆಗಳನ್ನು ಹೊರುವಷ್ಟು ಸಾಮರ್ಥ್ಯವಿಲ್ಲ. ಪಂಪ್ಡ್ ಸ್ಟೋರೇಜ್, ಚಕ್ರಾ, ವರಾಹಿ, ಲಿಂಗನಮಕ್ಕಿ, ಹಿರೇಭಾಸ್ಕರ, ಮಡೆನೂರು, ಸಾವೇಹಕ್ಲು, ಮಾಣಿ ಜಲಾಶಯದಂತಹ ಪರಿಸರ ಮಾರಕ ಯೋಜನೆಗಳು ಜಾರಿಗೊಂಡಿದ್ದು, ಈಗ ಸಾಗರ ಸಮೀಪದ ಬೇಸೂರಿನಲ್ಲಿ ಎನ್‌ಟಿಪಿಸಿ ಮಾರಕ ಅಣು ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಿದೆ ಎಂಬ ಅಧಿಕೃತ ಮಾಹಿತಿ ದೊರೆತಿದೆ. ಇದಕ್ಕೆ ಅನುಮತಿ ನೀಡುವುದರ ಮೂಲಕ ಜಿಲ್ಲಾಡಳಿತ ತನ್ನ ಬೇಜವಾಬ್ದಾರಿಯನ್ನು ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
PublicNext
05/05/2026 05:53 pm
LOADING...