ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಿಕೋದ್ಯಮದ ಪಾತ್ರ ದೊಡ್ಡದು 

ಚಾಮರಾಜನಗರ : ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಿಕೋದ್ಯಮದ ಪಾತ್ರ ಬಹಳ ದೊಡ್ಡದು. ಸಮಾಜ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೋದ್ಯಮ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಜೆಎಸ್‌ಎಸ್ ಮಹಿಳಾ ಕಾಲೇಜು ಸೆಮಿನಾರ್ ಹಾಲ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಾಮರಾಜನಗರ ಜಿಲ್ಲಾ ಘಟಕ ಸಹಯೋಗ ಜೆಎಸ್‌ಎಸ್‌ ಮಹಾವಿದ್ಯಾಪೀಠದ ವತಿಯಿಂದ ನಡೆದ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಿಕಾರಂಗ ಸಮಾಜವನ್ನು ಎಚ್ಚರಿಸುವ ಕೆಲಸ ಮಾಡುತ್ತಿದೆ. ದಿಕ್ಕು ತಪ್ಪುವ ಸಮಾಜ, ಜನಪ್ರತಿನಿಧಿಗಳನ್ನು ಎಚ್ಚರಿಸುವ, ಒಳ್ಳೆಯವರ ಮೇಲೆ ಬೆಳಕು ಚೆಲ್ಲುವ ಎರಡು ಕೆಲಸವನ್ನು ಪತ್ರಿಕಾರಂಗ ಮಾಡುತ್ತಿದೆ. ತಮ್ಮಲ್ಲಿ ಏನಾದರೂ ತಪ್ಪುಗಳಿದ್ದರೆ ತಿದ್ದಿಕೊಳ್ಳಲು ಒಂದು ಅವಕಾಶ ಇರುತ್ತದೆ.

ಜಿಲ್ಲೆ, ತಾಲೂಕು, ರಾಜ್ಯದಲ್ಲಿ ಪತ್ರಿಕಾರಂಗ ಬೆಳಕು ಚೆಲ್ಲುವ ಕೆಲಸವನ್ನು ಮಾಡುತ್ತಿದೆ ಎಂದರು.ಜಿಲ್ಲಾಧಿಕಾರಿ ಶ್ರೀರೂಪ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ನಮ್ಮ ಜಿಲ್ಲೆಯ ಪತ್ರಕರ್ತರಿಗೆ ಜೆಎಸ್‌ಎಸ್ ಮಹಾವಿದ್ಯಾಪೀಠವು ಶ್ರೀಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡಿರುವುದು ತುಂಬಾ ಸಂತಸವಾಗಿದೆ. ಜಿಲ್ಲೆಯು ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿದೆ. 160 ಗ್ರಾಮಗಳು ಹಾಡಿಗಳಲ್ಲಿದೆ. ಅಲ್ಲೆಲ್ಲ ನಮ್ಮ ಮಾಧ್ಯಮ ಮಿತ್ರರು ಹೋಗಿ ವರದಿ ಮಾಡುತ್ತಾರೆ. ಸಣ್ಣಪುಟ್ಟ ವಿಚಾರಗಳು ಜಿಲ್ಲಾಡಳಿತ ಗಮನಕ್ಕೆ ಬರುವುದಿಲ್ಲ. ಪತ್ರಿಕೆಗಳಲ್ಲಿ ಬರುವ ಸುದ್ದಿಗಳನ್ನು ಗಮನಿಸಿ, ಅಂತಹ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಕ್ರಮಕೈಗೊಳ್ಳುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

Edited By : PublicNext Desk
Kshetra Samachara

Kshetra Samachara

05/05/2026 06:14 pm

Cinque Terre

140

Cinque Terre

0

ಸಂಬಂಧಿತ ಸುದ್ದಿ