ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐದು ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರು ನಾಮಕರಣ - ಶ್ರೀಗಂಧ ಶೇಟ್ ಹೋರಾಟ ಸಮಿತಿ ರಾಜ್ಯಾಧ್ಯಕ್ಷ

ಹುಬ್ಬಳ್ಳಿ: ಕರ್ನಾಟಕ ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರು ನಾಮಕರಣ ಮಾಡಬೇಕೆಂದು ಸುಮಾರು ವರ್ಷಗಳಿಂದ ಹೋರಾಟ ಮಾಡ್ತಾ ಬಂದಿದ್ದಾರೆ. ಈಗ ಮತ್ತೆ ಕೇಂದ್ರ ಸರ್ಕಾರದ ಕಣ್ಣು ತೆರೆಸಲು ಚಳವಳಿ ಸಮಿತಿ ಮತ್ತೆ ಹೋರಾಟದ ಹಾದಿ ಹಿಡಿದಿದೆ. ಐದು ವಿಮಾನ ನಿಲ್ದಾಣಗಳ ಕನ್ನಡ ಮಹನೀಯರ ನಾಮಕರಣ ಚಳವಳಿ ಸಮಿತಿಯು ಯುವ ನಾಯಕ, ಕೆಜಿಪಿ ಫೌಂಡೇಶನ್ ಸಂಸ್ಥಾಪಕ ಶ್ರೀಗಂಧ ಶೇಟ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರು ನಾಮಕರಣ ಮಾಡಬೇಕೆಂದು ಆಗ್ರಹಿಸಿ, ನಾಮಕರಣ ಚಳವಳಿ ಸಮಿತಿ ವತಿಯಿಂದ ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಹಾಗೂ ಸಮಿತಿಯ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಹೋರಾಟದ ಕರಪತ್ರಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಚಾಲನೆ ನೀಡಿದರು. ನಾಡಿಗಾಗಿ ಶ್ರಮಿಸಿದ, ಮಡಿದ ಮಹನೀಯರನ್ನು ಹಾಗೂ ಕನ್ನಡಿಗರ ಹೋರಾಟ ನೆನಪಿಸಲು, ಚಿರಸ್ಥಾಯಿಯಾಗಿರಿಸಲು ರಾಜ್ಯದ ವಿಮಾನ ನಿಲ್ದಾಣಗಳಿಗೆ ಅವರ ಹೆಸರು ನಾಮಕರಣ ಮಾಡಲು ಹೋರಾಟ ಮಾಡುತ್ತಿರುವುದು ಶ್ರೇಷ್ಠ ಎಂದು ನಾಯಕರು ಹೇಳಿದರು.

ಇನ್ನು ಕಾಂಗ್ರೆಸ್ ಮುಖಂಡ ಶಿವಾನಂದ ಮುತ್ತಣ್ಣವರ ನೇತೃತ್ವದಲ್ಲಿ ಆರಂಭವಾದ ಈ ಹೋರಾಟದಲ್ಲಿ ಇದೇ ಮೇ 30 ರಂದು ನಗರದ ಮೂರು ಸಾವಿರ ಮಠದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ರಾಜಕೀಯ ನಾಯಕರು, ಸ್ಯಾಂಡಲ್‌ವುಡ್ ನಟರಾದ ಡಾ. ಶಿವರಾಜಕುಮಾರ್, ಕಿಚ್ಚ ಸುದೀಪ್, ರಾಕಿಂಗ್ ಸ್ಟಾರ್ ಯಶ್, ಧ್ರುವ ಸರ್ಜಾ ಸೇರಿದಂತೆ ನಾಯಕ‌ ನಟರು, ನಟಿಯರು ಆಗಮಿಸುತ್ತಿದ್ದಾರೆ. ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ ಇಟ್ಟಿದ್ದಾರೆ.

ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

05/05/2026 06:59 pm

Cinque Terre

37.13 K

Cinque Terre

2

ಸಂಬಂಧಿತ ಸುದ್ದಿ