ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಡಿಸಿಎಂ ಸಮ್ಮುಖದಲ್ಲಿ ಸಹಿ ಹಾಕಿ ಪತ್ರ ವಿನಿಮಯ ಮಾಡಿಕೊಂಡ ತುಷಾರ್ ಗಿರಿನಾಥ್

ಬೆಂಗಳೂರು: ಕರ್ನಾಟಕ ಸರ್ಕಾರವು ಸುಸ್ಥಿರ ಉದ್ಯೋಗ ಮತ್ತು ಅಭಿವೃದ್ಧಿ ದತ್ತಿ ಸಂಸ್ಥೆಯ ಸಹಯೋಗದೊಂದಿಗೆ ಬೆಂಗಳೂರು ಮಹಾನಗರ ಪ್ರದೇಶಕ್ಕೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್ ಅಭಿವೃದ್ಧಿಪಡಿಸುವ ಉದ್ದೇಶ ಪತ್ರಕ್ಕೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ISEG ಯ ನಿರ್ದೇಶಕ ಡಾ. ಶಿರೀಶ್ ಸಂಖೆ ರವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಪರಸ್ಪರ ಸಹಿ ಹಾಕಿ ಪತ್ರ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಒಡಂಬಡಿಕೆ ಉದ್ದೇಶದ ಬಗ್ಗೆ ವಿವರಿಸಿ, ಸಲಹೆ ಸೂಚನೆ ನೀಡಿದರು.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ಮತ್ತಿತರರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

05/05/2026 07:03 pm

Cinque Terre

298

Cinque Terre

0