ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಸ್ಕೂಟರ್ ಗೆ ತಡೆರಹಿತ ಬಸ್ ಡಿಕ್ಕಿ-ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಪತ್ತೆ

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್ ಬಳಿ ಸ್ಕೂಟರ್ ಗೆ ತಡೆರಹಿತ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಈ ಭೀಕರ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಪತ್ತೆಯಾಗಿದೆ

ಅಪಘಾತದಲ್ಲಿ ಸ್ಕೂಟರ್ ಸವಾರ ಅಂಗರಗುಡ್ಡೆ ನಿವಾಸಿ ವಿಜಯ್ ದೇವಾಡಿಗ(45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ , ಮಗು ಧನ್ವಿ(6) ಪವಾಡ ಸದೃಶ ಪಾರಾಗಿದ್ದಾರೆ.

ಈ ಭೀಕರ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅಪಘಾತದ ಮೈ ಜುಮ್ ಎನ್ನಿಸುತ್ತಿದೆ

ಗಾಯಾಳು ಸ್ಕೂಟರ್ ಸವಾರ ವಿಜಯ್ ಮುಲ್ಕಿ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿರುವಾಗ ಹಿಂದಿನಿಂದ ಅತಿ ವೇಗದಿಂದ ಬಂದ ತಡೆರಹಿತ ಬಸ್ಸು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಸ್ಕೂಟರ್ ಸವಾರ ವಿಜಯ್ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದು ಸ್ಕೂಟರ್ ಮೂರು ಪಲ್ಟಿಯಾಗಿದೆ.

ಗಾಯಾಳು ಸ್ಕೂಟರ್ ಸವಾರ ವಿಜಯ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

Edited By : Shivu K
PublicNext

PublicNext

05/05/2026 07:33 pm

Cinque Terre

15.4 K

Cinque Terre

0