ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಇರುವೈಲಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ - ತೆಂಗು ಸಹಿತ ಮರಗಿಡಗಳಿಗೆ ಹಾನಿ

ಮೂಡುಬಿದಿರೆ: ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಂಪುಗುಡ್ಡೆ ಎಂಬಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡು, ತೋಟದಲ್ಲಿದ್ದ ತೆಂಗು ಹಾಗೂ ವಿವಿಧ ಮರಗಿಡಗಳು ಸುಟ್ಟು ಹೋಗಿವೆ.

ಕಾಳೂರು ರಾಜೇಶ್ ಪೂಜಾರಿ ಎಂಬುವವರಿಗೆ ಸೇರಿದ ಜಾಗದಲ್ಲಿ ಈ ಅವಘಡ ಸಂಭವಿಸಿದ್ದು, ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಈ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ದಿವಾಕರ್ ಆಚಾರ್ಯ ಹಾಗೂ ಸಿಬ್ಬಂದಿಗಳಾದ ಪ್ರವೀಣ್ ಮತ್ತಿತರರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸ್ಥಳೀಯರಾದ ರಾಜೇಶ್ ಪೂಜಾರಿ ಕಾಳೂರು, ದಿನೇಶ್ ಶೆಟ್ಟಿ ದೊಡ್ಡಗುತ್ತು, ನಾಗೇಶ್ ನಾಯ್ಕ್, ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ನವೀನ್ ಪೂಜಾರಿ ಕಿಟ್ಟುಬೆಟ್ಟು, ಕಿಶೋರ್ ಶೆಟ್ಟಿ ಹಾಗೂ ಪದ್ಮನಾಭ ಪೂಜಾರಿ ಸಹಕರಿಸಿದರು.

Edited By :
PublicNext

PublicNext

05/05/2026 07:40 pm

Cinque Terre

10.98 K

Cinque Terre

0

ಸಂಬಂಧಿತ ಸುದ್ದಿ