ಬೆಂಗಳೂರು:ಕರ್ನಾಟಕ ಸರ್ಕಾರವು ಸುಸ್ಥಿರ ಉದ್ಯೋಗ ಮತ್ತು ಅಭಿವೃದ್ಧಿ ದತ್ತಿ ಸಂಸ್ಥೆಯ ಸಹಯೋಗದೊಂದಿಗೆ ಬೆಂಗಳೂರು ಮಹಾನಗರ ಪ್ರದೇಶಕ್ಕೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್ ಅಭಿವೃದ್ಧಿಪಡಿಸುವ ಉದ್ದೇಶ ಪತ್ರಕ್ಕೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ISEG ಯ ನಿರ್ದೇಶಕ ಡಾ. ಶಿರೀಷ್ ಸಂಖೇ ರವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಪರಸ್ಪರ ಸಹಿ ಹಾಕಿ ಪತ್ರ ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಒಡಂಬಡಿಕೆ ಉದ್ದೇಶದ ಬಗ್ಗೆ ವಿವರಿಸಿ, ಸಲಹೆ ಸೂಚನೆ ನೀಡಿದರು.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಷ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
05/05/2026 08:18 pm
LOADING...