ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಎನ್‌ಪಿಎ ನಿಲ್ಲಿಸಿರುವ ಸರ್ಕಾರದ ನಡೆ ಖಂಡನೀಯ - ಶಾಸಕ ಚನ್ನಬಸಪ್ಪ ಆಕ್ರೋಶ

ಶಿವಮೊಗ್ಗ : ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೌಕರರಿಗೆ ನೀಡಲಾಗುತ್ತಿದ್ದ ನಾನ್ ಪ್ರಾಕ್ಟಿಸಿಂಗ್ ಭತ್ಯೆಯನ್ನು (ಎನ್‌ಪಿಎ) ನಿಲ್ಲಿಸಿರುವ ಸರ್ಕಾರದ ನಡೆ ಖಂಡನೀಯವಾಗಿದ್ದು, ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹಿಸಿದ್ದಾರೆ.

ಶಿಕ್ಷಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿದರು. ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಿಗಳು ಎದುರಿಸುತ್ತಿರುವ ತಾಂತ್ರಿಕ ಮತ್ತು ಆರ್ಥಿಕ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಅವರು, ವಿಜ್ಞಾನಿಗಳು ಮತ್ತು ಶಿಕ್ಷಕರು ಸಮಾಜದ ಬೆನ್ನೆಲುಬು. ಅವರ ಭತ್ಯೆಗಳನ್ನು ಕಡಿತಗೊಳಿಸುವುದು ಅವರ ವೃತ್ತಿ ನಿಷ್ಠೆಗೆ ಮಾಡುವ ಅವಮಾನ. ಸ್ಥಗಿತಗೊಂಡಿರುವ ಎನ್‌ಪಿಎ ಅನ್ನು ಕೂಡಲೇ ಬಿಡುಗಡೆ ಮಾಡಲು ಮತ್ತು ಶಿಕ್ಷಕರ ಹಿತರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

Edited By : PublicNext Desk
PublicNext

PublicNext

05/05/2026 09:08 pm

Cinque Terre

7.81 K

Cinque Terre

0

ಸಂಬಂಧಿತ ಸುದ್ದಿ