ಚಿಕ್ಕಮಗಳೂರು ನಗರದಲ್ಲಿ ಪ್ರಥಮ ಬಾರಿಗೆ ಆರಂಭವಾಗಿರುವ ಫುಡ್ ಕೋರ್ಟ್ ಆವರಣದಲ್ಲಿ ಶುಚಿತ್ವ ಕಾಪಾಡಲು ವ್ಯಾಪಾರಿಗಳು ಮತ್ತು ಗ್ರಾಹಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಅವರು ಕರೆ ನೀಡಿದ್ದಾರೆ. ನಗರಸಭೆ ಆಯುಕ್ತರಾದ ಬಸವರಾಜ್ ಅವರ ನೇತೃತ್ವದಲ್ಲಿ ಪೌರಕಾರ್ಮಿಕರು ಕಳೆದ ಕೆಲವು ದಿನಗಳಿಂದ ಶ್ರಮವಹಿಸಿ ಈ ಪ್ರದೇಶವನ್ನು ಸುಂದರಗೊಳಿಸಿದ್ದು, ಈ ಅಂದವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಅವರು ತಿಳಿಸಿದರು.
ಫುಡ್ ಕೋರ್ಟ್‌ನಲ್ಲಿ ಮಳಿಗೆಗಳನ್ನು ಹೊಂದಿರುವವರು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ ಪೂರೈಸಬೇಕು ಮತ್ತು ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ನಗರಸಭೆಗೆ ಅಗತ್ಯ ಅನುದಾನ ಒದಗಿಸಿ ಉತ್ತಮ ಆಡಳಿತಕ್ಕೆ ಅನುವು ಮಾಡಿಕೊಟ್ಟಿರುವ ಶಾಸಕರಿಗೂ ಅವರು ಕೃತಜ್ಞತೆ ಸಲ್ಲಿಸಿದರು.
Kshetra Samachara
05/05/2026 09:48 pm
LOADING...