ಹುಬ್ಬಳ್ಳಿ: ಅಕ್ರಮವಾಗಿ ಗೋವು ಸಾಗಾಟದ ಪ್ರಕರಣ ಭೇದಿಸುವಲ್ಲಿ ಹುಬ್ಬಳ್ಳಿಯ ಶ್ರೀರಾಮಸೇನಾ ಕಾರ್ಯಕರ್ತರು ಯಶಸ್ವಿಯಾಗಿದ್ದು, ಅಕ್ರಮ ಗೋವು ಸಾಗಾಟದ ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ಶ್ರೀ ರಾಮ ಸೇನಾ ಹುಬ್ಬಳ್ಳಿ ಪ್ರಮುಖ ಕಾರ್ಯಕರ್ತರು ತಡೆ ಹಿಡಿದು ಹಳೇ ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೂ ತಡೆ ಹಿಡಿದ ವಾಹನ ಹಾಗೂ ತಪ್ಪಿತಸ್ಥರ ವಿರುದ್ಧ ದೂರು ನೀಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಲ್ಲೇಶ್ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/05/2026 10:43 pm
LOADING...