ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ: ಕುಡಿಯುವ ನೀರಿಗಾಗಿ ಖಾಲಿ ಕೊಡ, ತಮಟೆ ಹಿಡಿದು ವಿನೂತನ ಪ್ರತಿಭಟನೆ

ಯಾದಗಿರಿ: ಗುರುಮಿಠಕಲ್ ತಾಲೂಕಿನ ಕಿಲ್ಲನಕೆರಾ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಖಾಲಿ ಕೊಡ ಹಿಡಿದು ತಮಟೆ ಬಾರಿಸುತ್ತ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮರಿಚಿಕೆಯಾಗಿದ್ದು ಚರಂಡಿ ಇಲ್ಲದೆ ಗಬ್ಬೆದ್ದು ನಾರುತ್ತಿದೆ. ರಾಜ್ಯ ಸರ್ಕಾರದ ಹಣ ವ್ಯಯ ಮಾಡಿ ಘಟಕ ನಿರ್ಮಿಸಿ ನಿರ್ವಹಣೆ ಮಾಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ.

ಸರಬರಾಜು ಆಗುವ ನೀರು ಸೋರಿಕೆಯಾಗಿ ಕಲುಷಿತ ವಾತಾವರಣ ನಿರ್ಮಾಣಗೊಂಡಿದೆ. ಕೂಡಲೇ ಜಿಲ್ಲಾ ಪಂಚಾಯತ್ ಸಿಇಓ ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

Edited By : Manjunath H D
PublicNext

PublicNext

05/05/2026 11:04 pm

Cinque Terre

14.37 K

Cinque Terre

0