ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಇಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ರಾಜ್ಯಪಾಲರು ಮತ್ತು ಉನ್ನತ ಶಿಕ್ಷಣ ಸಚಿವರು ಇಂದು ಬೆಳಗ್ಗೆ 9:25ಕ್ಕೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. 10:15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಹೊರಟು 10:45ಕ್ಕೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿ ಆವರಣಕ್ಕೆ ಆಗಮಿಸಲಿದ್ದಾರೆ. ವಿಶ್ವವಿದ್ಯಾಲಯದ ಬಸವ ಸಭಾಭವನದಲ್ಲಿ ಆಯೋಜಿಸಿರುವ 35ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಘಟಿಕೋತ್ಸವ ಮತ್ತು ರಾಜ್ಯಪಾಲರ ಭೇಟಿ ಹಿನ್ನೆಲೆ ಶಂಕರಘಟ್ಟದ ಜ್ಞಾನಸಹ್ಯಾದ್ರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಾಗಿದೆ. ಜಿಲ್ಲಾ ರಕ್ಷಣಧಿಕಾರಿ ಬಿ.ನಿಖಲ್ ಅವರು ಇಂದು ಕುವೆಂಪು ವಿವಿ ಆವರಣಕ್ಕೆ ಭೇಟಿ ನೀಡಿ ಭದ್ರತೆಯ ಪರಿಶೀಲನೆ ನಡೆಸಿದರು. ಶ್ವಾನದಳ, ಬಾಂಬ್ ಪತ್ತೆ ದಳ ಕೂಡ ಕುವೆಂಪು ವಿವಿ ಆವರಣದಲ್ಲಿ ಶೋಧ ಕಾರ್ಯ ನಡೆಸಿತು.
Kshetra Samachara
06/05/2026 08:24 am
LOADING...