ಶಿವಮೊಗ್ಗ : ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರಿಗೆ ವ್ಯಕ್ತಿಯೊಬ್ಬ ಕರೆ ಮಾಡಿ ಹಣ ವಾಪಸ್ ಕೊಡದಿದ್ದರೆ ಹಲ್ಲೆ ಮಾಡಲಾಗುತ್ತದೆ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ನ್ಯಾಯಾಲಯದ ಸಿಬ್ಬಂದಿಯೊಬ್ಬರಿಗೆ ಕರ್ತವ್ಯದಲ್ಲಿದ್ದಾಗ ಅಪರಿಚಿತ ನಂಬರ್‌ನಿಂದ ಕರೆ ಬಂದಿತ್ತು. ರಿಸೀವ್ ಮಾಡಿದಾಗ, ಕರೆ ಮಾಡಿದ ವ್ಯಕ್ತಿಯು ತನ್ನ ಹೆಸರನ್ನು ‘ಮಂಗಳಮ್ಮ’ ಎಂದು ಹೇಳಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ನೀವು ಯಾರಿಂದಲೋ 12 ಲಕ್ಷ ಹಣ ಪಡೆದಿದ್ದೀರಿ. ಆ ಹಣವನ್ನು ಕೂಡಲೇ ವಾಪಸ್ ನೀಡಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಹಲ್ಲೆ
ನಡೆಸಲಾಗುವುದು ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಒಡ್ಡಿದ್ದಾನೆ. ಈ ಹಿನ್ನೆಲೆ ಸಿಬ್ಬಂದಿಯು ಪೊಲೀಸರಿಗೆ ದೂರು ನೀಡಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
06/05/2026 08:31 am
LOADING...