ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಬೀದಿ ನಾಯಿಗಳ ಹಾವಳಿ - ಪುಟ್ಟ ಬಾಲಕನ ಮೇಲೆ ಭೀಕರ ದಾಳಿ - ಬೆಚ್ಚಿಬಿದ್ದ ಸ್ಥಳೀಯರು

ವಿಜಯಪುರ ನಗರದಲ್ಲಿ ಮತ್ತೆ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ರಾಜಕುಮಾರ ಲೇಔಟ್‌ನಲ್ಲಿ ಮೂರು ವರ್ಷದ ಪುಟ್ಟ ಬಾಲಕನ ಮೇಲೆ ಬೀದಿ ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದೆ. ಈ ಘಟನೆ ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

ವಿರಾಜ್ ಸಂತೋಷ ಬಿರಾದಾರ (3) ನಾಯಿ ದಾಳಿಗೆ ಒಳಗಾದ ಬಾಲಕ.

ವಿರಾಜ್ ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಯೊಂದು ಬಾಲಕನ ಮೇಲೆ ದಾಳಿ ಮಾಡಿ ಬಾಯಿಯಲ್ಲಿ ಕಚ್ಚಿ 100 ಅಡಿ ದೂರ ಎಳೆದೊಯ್ದಿದೆ. ಈ ಭಯಾನಕ ದೃಶ್ಯವನ್ನು ಕಂಡ ತಕ್ಷಣ ಸ್ಥಳೀಯರು ಓಡಿ ಬಂದು ಬಾಲಕನನ್ನು ರಕ್ಷಿಸಿದ್ದಾರೆ.

ಸದ್ಯ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಬಾಲಕನ ಬೆನ್ನು ತೊಡೆಗೆ ಗಾಯವಾಗಿದೆ ಎನ್ನಲಾಗಿದೆ.

ಬಾಲಕನ ಮೇಲೆ ನಾಯಿ ದಾಳಿ ಮಾಡಿದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯಿಂದಾಗಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಬ್ಲಿಕ್ ನೆಕ್ಸ್ಟ್ ವಿಜಯಪುರ

Edited By : Vinayak Patil
PublicNext

PublicNext

06/05/2026 09:00 am

Cinque Terre

11.6 K

Cinque Terre

0