ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ವಿದ್ಯುತ್ ತಗುಲಿ ಬಾಲಕಿ ಸಾವು - ಇಂಗಳಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ

ಚಿಕ್ಕೋಡಿ: ವಿದ್ಯುತ್ ತಗುಲಿ ಮನೆಯ ಮೇಲಿಂದ ಬಿದ್ದು 9 ವರ್ಷದ ಬಾಲಕಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಸಾನ್ವಿ ಕಾಂಬಳೆ (9) ಎಂದು ಗುರುತಿಸಲಾಗಿದೆ. ಆಕೆ ಇಂಗಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ನಿನ್ನೆ ಸಂಜೆ ವೇಳೆ ಮನೆಯಲ್ಲಿ ಆಟವಾಡುತ್ತಿದ್ದಾಗ, ಮನೆಯ ಮೇಲಿದ್ದ ವಿದ್ಯುತ್ ತಂತಿಯ ಮೇಲೆ ಸ್ಕಿಪ್ಪಿಂಗ್ ಹಗ್ಗ ಬಿದ್ದಿದೆ. ಹಗ್ಗವನ್ನು ತೆಗೆದುಕೊಳ್ಳಲು ಮೇಲಕ್ಕೆ ಹೋದಾಗ ಬಾಲಕಿಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ, ಪರಿಣಾಮ ಮನೆಯ ಮೇಲಿಂದ ಕೆಳಗೆ ಬಿದ್ದ ಕೂಡಲೇ ತಕ್ಷಣವೇ ಬಾಲಕಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

06/05/2026 09:45 am

Cinque Terre

1.06 K

Cinque Terre

0

ಸಂಬಂಧಿತ ಸುದ್ದಿ