ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ಸಲೂನ್, ಬ್ಯೂಟಿ ಪಾರ್ಲರ್‌ಗಳಲ್ಲಿ ತಪಾಸಣೆ ನಡೆಸಿದ ಪೊಲೀಸರು

ಶಿವಮೊಗ್ಗ : ನಗರದ ಸ್ಪಾಗಳಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪವೊಂದು ನೇರವಾಗಿ ಕೇಳಿ ಬಂದ ಬೆನ್ನಲ್ಲೇ ಶಿವಮೊಗ್ಗ ಪೊಲೀಸ್ ನಿಧಾನವಾಗಿಯಾದರೂ ಅಲರ್ಟ್ ಆಗಿದ್ದಾರೆ. ಈ ಸಂಬಂಧ ಎಸ್​ಪಿ ನಿಖಿಲ್ ಬಿ ನಗರದಲ್ಲಿರುವ ವಿವಿಧ ಬ್ಯೂಟಿ ಪಾರ್ಲರ್‌ಗಳಲ್ಲಿ ರಾಂಡಮ್​ ಚೆಕ್ಕಿಂಗ್ ಆರಂಭಿಸಿದ್ದಾರೆ.

ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಪೊಲೀಸ್ ತಂಡವೊಂದು ಕಾರ್ಯಾಚರಣೆ ನಡೆಸಿದೆ. ಐವರು ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಯ ಜೊತೆಗೆ ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ವಿವಿಧ ಸಲೂನ್ ಹಾಗೂ ಬ್ಯೂಟಿ ಪಾರ್ಲರ್ ಗಳಿಗೆ ದಿಢೀರ್ ಭೇಟಿಕೊಟ್ಟ ಪೊಲೀಸ್ ತಂಡ ತಪಾಸಣೆ ನಡೆಸಿದೆ.

ವಿಶೇಷ ತಂಡ ಏಕಕಾಲದಲ್ಲಿ ಹಲವು ಸಲೂನ್ ಹಾಗೂ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡಿ ಸ್ಪಾಗಳಲ್ಲಿ ಯಾವುದಾದರೂ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದೆ.

ಅಲ್ಲದೆ ಸ್ಪಾದಲ್ಲಿ ನಡೆಯುವ ಚಟುವಟಿಕೆಗಳನ್ನು ಪರಿಶೀಲಿಸಿದೆ, ಸಿಸಿ ಕ್ಯಾಮರಾಗಳನ್ನು ಹಾಗೂ ದಾಖಲೆಗಳನ್ನ ತಪಾಸಣೆ ಮಾಡಿದೆ. ಇನ್ನೂ ಈ ವೇಳೆ ಮಾಲೀಕರಿಗೆ ಹಾಗೂ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ. ಯಾವುದೇ ರೀತಿಯ ಅಕ್ರಮ ಅಥವಾ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

06/05/2026 10:55 am

Cinque Terre

4 K

Cinque Terre

0

ಸಂಬಂಧಿತ ಸುದ್ದಿ