ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ (ಹುಡಾ) ತನ್ನ ಮೂಲ ಉದ್ದೇಶವನ್ನೇ ಮರೆತಿದೆ. ಹುಡಾದ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ವಿರುದ್ಧ ಸಾರ್ವಜನಿಕರೇ ರೊಚ್ಚಿಗೆದ್ದಿದ್ದಾರೆ.
ಹು-ಧಾ ಮಹಾನಗರದ ಸುತ್ತಲಿನ 36 ಹಳ್ಳಿಗಳನ್ನು ವಶಪಡಿಸಿಕೊಂಡಿದ್ದು, ಅಲ್ಲಿರುವ ಸರ್ಕಾರಿ ಭೂಮಿಯನ್ನು ನಿವೇಶನ ರಹಿತರಿಗೆ ನೀಡಿಲ್ಲ ಈ ನಿಟ್ಟಿನಲ್ಲಿ ಹೋರಾಟಕ್ಕೆ ಮುಂದಾಗಿದ್ದಾರೆ.
ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಅವಳಿನಗರದ ಸುತ್ತಲಿನ 36 ಹಳ್ಳಿಗಳನ್ನು ವಶಪಡಿಸಿಕೊಂಡಿದೆ. ಆದರೆ ಅಲ್ಲಿರುವ ಸರ್ಕಾರಿ ಜಮೀನನ್ನು ನಿವೇಶನ ರಹಿತರಿಗೆ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಯೋಗ್ಯ ದರದಲ್ಲಿ ಹಂಚಿಕೆ ಮಾಡಬೇಕು' ಎಂದು ನಿವೇಶನ ರಹಿತರ ಆಂದೋಲನ ಸಂಘಟನೆ ಸದಸ್ಯರು ಆಗ್ರಹಿಸಿದ್ದಾರೆ.
ಹೀಗಿದ್ದರೂ ಹುಡಾ ಮಾತ್ರ ಇದುವರೆಗೆ ಕಾರ್ಯಪ್ರವೃತ್ತರಾಗಿಲ್ಲ. ಅವಳಿನಗರದಲ್ಲಿ ಸಾವಿರಾರು ಕುಟುಂಬಗಳು ನಿವೇಶನವಿಲ್ಲದೆ ಹಾದಿ, ಬೀದಿಯಲ್ಲಿ ವಾಸಿಸುತ್ತಿವೆ. ಅವರಿಗೆ ನಿವೇಶನ ಹಂಚಿಕೆ ಮಾಡಿದರೆ ಸೂರು ಕಟ್ಟಿಕೊಂಡು ನೆಮ್ಮದಿಯ ಬದುಕು ಕಂಡುಕೊಳ್ಳುತ್ತಾರೆ' ಎಂಬುದು ವಸತಿ ರಹಿತರ ಆಗ್ರಹ.
ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಪ್ರತಿವರ್ಷ ಒಂದನೇ ಹಂತ, ಎರಡನೇ ಹಂತ ಎಂದು ನಿವೇಶನ ಹಂಚಿಕೆ ಮಾಡುತ್ತದೆ. ಆದರೆ, ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ತನ್ನ ಕಾರ್ಯವಲ್ಲ ಎಂದು ಕೈಕಟ್ಟಿ ಕುಳಿತಿದೆ.
ನಗರದಲ್ಲಿರುವ ಕಡುಬಡವರಿಗೆ ಕಾನೂನಿನ ಅಡಿಯಲ್ಲಿ ನಿವೇಶನ ನೀಡುವಲ್ಲಿ ಮುಂದಾಗಬೇಕು. ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಎಷ್ಟು ಕುಟುಂಬಗಳಿಗೆ ಈವರೆಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಬಹಿರಂಗ ಪಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ..
ಮಲ್ಲೇಶ್ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/05/2026 10:56 am
LOADING...