ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

KPSC ಸುಧಾರಣೆಗೆ ಸದನ ಸಮಿತಿ ರಚನೆ - ಮಹೇಶ್ ಟೆಂಗಿನಕಾಯಿ ಆಯ್ಕೆ ಸ್ವಾಗತಾರ್ಹ - ಸಂತೋಷ ಆರ್ ಶೆಟ್ಟಿ

ಹುಬ್ಬಳ್ಳಿ: ಕರ್ನಾಟಕ ಲೋಕಸೇವಾ ಆಯೋಗ (KPSC) ನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟಲು ಹಾಗೂ ಆಯೋಗದ ಕಾರ್ಯವೈಖರಿಯಲ್ಲಿ ಸಮಗ್ರ ಸುಧಾರಣೆಗಳನ್ನು ತರಲು ರಾಜ್ಯ ಸರ್ಕಾರವು ಮಹತ್ವದ ‘ಸದನ ಸಮಿತಿ’ಯನ್ನು ರಚಿಸಿರುವುದು ಅತ್ಯಂತ ಸ್ವಾಗತಾರ್ಹ ಕ್ರಮ ಎಂದು ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಸಮಾಜ ಸೇವಕರಾದ ಸಂತೋಷ ಆರ್ ಶೆಟ್ಟಿ ತಿಳಿಸಿದ್ದಾರೆ.

ಈ ಸಮಿತಿಗೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಜನಪ್ರಿಯ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರನ್ನು ಸದಸ್ಯರಾಗಿ ಆಯ್ಕೆ ಮಾಡಿರುವುದನ್ನು ಅವರು ಹರ್ಷದಿಂದ ಸ್ವಾಗತಿಸಿ, ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ನಿರ್ಮೂಲನೆ ಮಾಡಿ, ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವುದು ಅತ್ಯಂತ ಅಗತ್ಯ. ಯುವಜನತೆಯ ಭವಿಷ್ಯವು ಈ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ. ಈ ನಿಟ್ಟಿನಲ್ಲಿ ಸದನ ಸಮಿತಿಯ ಕಾರ್ಯಪಟುತ್ವ ಮಹತ್ವದ್ದಾಗಿದೆ,” ಎಂದು ಅವರು ಅಭಿಪ್ರಾಯಪಟ್ಟರು.

ಹೆಚ್ಚುವರಿಯಾಗಿ, ಮಹೇಶ್ ಟೆಂಗಿನಕಾಯಿ ಅವರು ತಮ್ಮ ಕಾರ್ಯಾವಧಿಯಲ್ಲಿ ಪಾರದರ್ಶಕತೆ ಹಾಗೂ ನಿಷ್ಪಕ್ಷಪಾತತೆಯನ್ನು ಕಾಪಾಡಿ, ಅಭ್ಯರ್ಥಿಗಳಲ್ಲಿ ವಿಶ್ವಾಸವನ್ನು ಮೂಡಿಸುವಂತೆ ಕಾರ್ಯನಿರ್ವಹಿಸಬೇಕು ಎಂದು ಸಂತೋಷ ಆರ್ ಶೆಟ್ಟಿ ಆಶಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

06/05/2026 12:53 pm

Cinque Terre

8.81 K

Cinque Terre

0

ಸಂಬಂಧಿತ ಸುದ್ದಿ