ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಕ್ಕಳ ದೌರ್ಜನ್ಯ ಆರೋಪ : ವಚನಾನಂದ ಶ್ರೀಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು

ದಾವಣಗೆರೆ: ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ವಚನಾನಂದ ಶ್ರೀಗಳಿಗೆ ದಾವಣಗೆರೆಯ ವಿಶೇಷ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ದಾವಣಗೆರೆ ಜಿಲ್ಲೆಯ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರು ತಮ್ಮ ವಿರುದ್ಧ ಕೇಳಿಬಂದಿದ್ದ ಆರೋಪಗಳ ಹಿನ್ನೆಲೆಯಲ್ಲಿ ಏಪ್ರಿಲ್ 21ರಂದು ವಿಶೇಷ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ನ್ಯಾಯಾಲಯದ ಅನುಮತಿ ಇಲ್ಲದೆ ನ್ಯಾಯವ್ಯಾಪ್ತಿ ಬಿಟ್ಟು ಹೋಗಬಾರದು ಎಂಬ ಪ್ರಮುಖ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.

ಹರಿಹರ ಮಠದ ಹಾಸ್ಟೆಲ್‌ನಲ್ಲಿ ವಾಸವಿದ್ದ ಮಕ್ಕಳ ಮೇಲೆ ಸ್ವಾಮೀಜಿ ಹಾಗೂ ಅವರ ಬೆಂಬಲಿಗರು ದೌರ್ಜನ್ಯ ಎಸಗುತ್ತಿದ್ದರು ಎಂದು ಆರೋಪಿಸಿ ಮೂವರು ಮಕ್ಕಳು ಮಕ್ಕಳ ಕಲ್ಯಾಣ ಸಮಿತಿ (CWC) ಮುಂದೆ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ವಚನಾನಂದ ಸ್ವಾಮೀಜಿ ವಿರುದ್ಧ ಮಕ್ಕಳ ದೌರ್ಜನ್ಯ ಆರೋಪ ಕೇಳಿಬಂದಿತ್ತು.

Edited By :
PublicNext

PublicNext

06/05/2026 02:55 pm

Cinque Terre

1.93 K

Cinque Terre

0