ಉಡುಪಿ: ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದಡಿ ಇಬ್ಬರ ವಿರುದ್ಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಕುರ್ಕಲ್ ಉಡುಪಿ ನಿವಾಸಿ ಸುಹಾಸ್ (21) ಹಾಗೂ ಕಾಪು ಭಾರತನಗರದ ಲವ ಶೆಟ್ಟಿ (64) ಎಂದು ಗುರುತಿಸಲಾಗಿದೆ.ಇವರು ಪೆರ್ಡೂರು ಕಡೆಯಿಂದ ಹಿರಿಯಡ್ಕ ಕಡೆಗೆ ಬೋಲೇರೊ ಟೆಂಪೋ ಗೂಡ್ಸ್ ವಾಹನದಲ್ಲಿ ನಾಲ್ಕು ಜಾನುವಾರುಗಳನ್ನು ಸಾಗಿಸುತ್ತಿದ್ದು, ಅವುಗಳಿಗೆ ಸಮರ್ಪಕ ಆಹಾರ ಮತ್ತು ನೀರು ನೀಡದೇ, ಒಂದಕ್ಕೊಂದು ತಾಗುವಂತೆ ಹಗ್ಗದಿಂದ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಲಾಗುತ್ತಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸಿ ಮಾಂಸಕ್ಕಾಗಿ ಬಳಸುವ ಉದ್ದೇಶ ಹೊಂದಿದ್ದರು ಎಂಬ ಮಾಹಿತಿಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಇದೇ ವೇಳೆ ವಾಹನವನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಪಕ್ಕಾಲು ಹೆಬ್ಬಾರು ಸೇತುವೆ ಸಮೀಪ ಚರಂಡಿಗೆ ಇಳಿಸಿರುವುದಾಗಿ ತಿಳಿದುಬಂದಿದೆ.ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Kshetra Samachara
06/05/2026 03:24 pm
LOADING...