ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಆಘಾತಕಾರಿ ಹಾಗೂ ಕುತೂಹಲಕಾರಿ ಬೆಳವಣಿಗೆಯೊಂದು ನಡೆದಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಕಾಂಗ್ರೆಸ್ ತನ್ನ ಪೂರ್ಣ ಬೆಂಬಲವನ್ನು ಘೋಷಿಸಿದೆ.
ಚೆನ್ನೈನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮುಖಂಡರು ವಿಜಯ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ಟಿಎನ್‌ಸಿಸಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಒಮ್ಮತದಿಂದ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿವೆ. ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಬೇಕಾದ ಅಗತ್ಯ ಸಂಖ್ಯಾಬಲವನ್ನು ಒದಗಿಸಲು ಕಾಂಗ್ರೆಸ್ ಸಿದ್ಧವಿದ್ದು, ಈ ಸಂಬಂಧ ಅಧಿಕೃತ ಮಾತುಕತೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ.
PublicNext
06/05/2026 03:27 pm
LOADING...