ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ನಾಯಕತ್ವ ಬದಲಾವಣೆಯ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕತ್ವದ ಬಗ್ಗೆ ಪದೇ ಪದೇ ಚರ್ಚೆಯಾಗುತ್ತಿರುವುದು ಆಡಳಿತದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ವಿನಾಕಾರಣ ಗೊಂದಲ ಸೃಷ್ಟಿಸದೆ, ಪಕ್ಷದ ವರಿಷ್ಠರು ಈ ವಿಚಾರದಲ್ಲಿ ಶೀಘ್ರ ತೀರ್ಮಾನ ಕೈಗೊಳ್ಳಬೇಕು ಎಂದಿದ್ದಾರೆ. "ಚುನಾವಣೆಗಳು ಮುಗಿದಿವೆ, ಈಗ ಅಭಿವೃದ್ಧಿ ಮತ್ತು ಜನಪರ ಆಡಳಿತದ ಕಡೆಗೆ ಗಮನ ಹರಿಸಬೇಕಾದ ಸಮಯ. ಅನಗತ್ಯ ಹೇಳಿಕೆಗಳಿಂದ ಕಾರ್ಯಕರ್ತರಲ್ಲಿ ಮತ್ತು ಜನರಲ್ಲಿ ತಪ್ಪು ಸಂದೇಶ ಹೋಗಬಾರದು" ಎಂದು ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಅಥವಾ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವೆಲ್ಲವೂ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರ. ಆದರೆ ಅನಿಶ್ಚಿತತೆಯ ವಾತಾವರಣ ಮುಂದುವರಿಯುವುದು ಸರಿಯಲ್ಲ ಎಂಬ ಖಡಕ್ ನಿಲುವನ್ನು ವ್ಯಕ್ತಪಡಿಸಿದ್ದಾರೆ.
PublicNext
06/05/2026 04:00 pm
LOADING...