ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೈವೇ ನೆಸ್ಟ್ ಟೀ ಅಂಗಡಿ ಹುಡುಗನ ಮೇಲೆ ಮನಬಂದಂತೆ ದೇವನಹಳ್ಳಿ ಠಾಣಾ ಇನ್ಸ್‌ಪೆಕ್ಟರ್ ರಾಕೇಶ್ ಥಳಿಸಿದ್ದ. ಕಳೆದ ಕೆಲ ದಿನಗಳ ಹಿಂದೆ ಇನ್ಸ್‌ಪೆಕ್ಟರ್ ರಾಕೇಶ್ ಹಲ್ಲೆ ಮಾಡಿರುವ ದೃಶ್ಯ ವೈರಲ್ ಆಗಿತ್ತು. ಪ್ರಕರಣದಲ್ಲಿ ದೇವನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರೇವಣ್ಣ ಹಲ್ಲೆಯ ಸಿಸಿಟಿವಿ ದೃಶ್ಯ ಮಾಧ್ಯಮಗಳಿಗೆ ಕೊಟ್ಟಿದ್ದಾರೆ ಎಂದು ಕರ್ತವ್ಯದಿಂದ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
ತಪ್ಪು ಮಾಡಿದ ಪೊಲೀಸ್ ಇನ್ಸ್‌ಪೆಕ್ಟರ್ ರಾಕೇಶ್ ವಿರುದ್ಧ ಕ್ರಮ ಆಗಿಲ್ಲ.ತಪ್ಪೇ ಮಾಡದ ಪೊಲೀಸ್ ಕಾನ್‌ಸ್ಟೆಬಲ್ ರೇವಣ್ಣ ಮೇಲೆ ಕ್ರಮ ಆಗಿದೆ. ಆದೇಶದಿಂದ ಒತ್ತಡ ಏರುವ ಅಧಿಕಾರಿಗಳಿಗೆ ಮಣೆ ಹಾಕಿದೆಯಾ ಪೊಲೀಸ್ ಇಲಾಖೆ ಎಂಬ ಅನುಮಾನ ವ್ಯಕ್ತವಾಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು, ತಪ್ಪೇ ಮಾಡದ ಅಧಿಕಾರಿಗಳಿಗಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗುತ್ತಿದೆ.
PublicNext
06/05/2026 04:20 pm
LOADING...