ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿರುವ 'ತಮಿಳಗ ವೆಟ್ರಿ ಕಳಗಂ' (TVK) ಪಕ್ಷದ ಅಧ್ಯಕ್ಷ, ನಟ ದಳಪತಿ ವಿಜಯ್ ಇಂದು ಚೆನ್ನೈನ ರಾಜ್‌ಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ತಮ್ಮ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಬೇಕೆಂದು ಅಧಿಕೃತವಾಗಿ ಹಕ್ಕು ಮಂಡಿಸಿದ್ದಾರೆ.
ಇತ್ತೀಚೆಗಷ್ಟೇ ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ ದಳಪತಿ ವಿಜಯ್ ನೇತೃತ್ವದ TVK ಪಕ್ಷವು ಒಟ್ಟು 108 ಸ್ಥಾನಗಳನ್ನು ಗೆಲ್ಲುವ ಮೂಲಕ ತಮಿಳುನಾಡಿನ ಅತಿ ದೊಡ್ಡ ಒಂಟಿ ಪಕ್ಷವಾಗಿ ಹೊರಹೊಮ್ಮಿದೆ.
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಕನಿಷ್ಠ 118 ಸ್ಥಾನಗಳ ಅಗತ್ಯವಿದ್ದು, ವಿಜಯ್ ಪಕ್ಷಕ್ಕೆ ಬಹುಮತಕ್ಕೆ ಕೇವಲ 10 ಸ್ಥಾನಗಳ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಇತರೆ ಪಕ್ಷಗಳ ಬೆಂಬಲದೊಂದಿಗೆ ಮ್ಯಾಜಿಕ್ ನಂಬರ್ ಸಾಬೀತುಪಡಿಸಲು ವಿಜಯ್ ಸಜ್ಜಾಗಿದ್ದಾರೆ.
ಈಗಾಗಲೇ ಇ-ಮೇಲ್ ಮೂಲಕ ಇಂದು ಖುದ್ದಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ಶಾಸಕರ ಬೆಂಬಲದ ಪತ್ರವನ್ನು ಹಸ್ತಾಂತರಿಸಿದ್ದಾರೆ. ತಮಗೆ ಬಹುಮತ ಸಾಬೀತುಪಡಿಸಲು ಕಾಲಾವಕಾಶ ನೀಡುವಂತೆ ಕೋರಿದ್ದು, ಮೇ 7 ರಂದು ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ವದಂತಿಗಳೂ ದಟ್ಟವಾಗಿವೆ.
PublicNext
06/05/2026 04:36 pm
LOADING...