ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಬಲೇಶ್ವರದಲ್ಲಿ ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸಚಿವ ಎಂ.ಬಿ.ಪಾಟೀಲ ಚಾಲನೆ

ವಿಜಯಪುರ : ಬಬಲೇಶ್ವರ ಮತಕ್ಷೇತ್ರದ ಸೋಮದೇವರ ಹಟ್ಟಿಯಿಂದ ಮಲಕನದೇವರ ಹಟ್ಟಿ ಗ್ರಾಮದವರೆಗೆ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 1.10 ಕಿ.ಮೀ ರಸ್ತೆ ನಿರ್ಮಾಣಕ್ಕೆ ಸಚಿವ ಎಂ.ಬಿ.ಪಾಟೀಲ ಭೂಮಿಪೂಜೆ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಇನ್ನೂ ಈ ಬಹುನಿರೀಕ್ಷಿತ ಯೋಜನೆಯು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಿದೆ.

ಈ ಭೂಮಿಪೂಜೆ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ತಾಯಂದಿರು ಸೇರಿದಂತೆ ಅನೇಕ ಗ್ರಾಮಸ್ಥರು ಭಾಗವಹಿಸಿ ಕಾಮಗಾರಿಯ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಕೆಲವೇ ದಿನಗಳಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಇದು ಈ ಭಾಗದ ಜನರಿಗೆ ಉತ್ತಮ ಸಂಪರ್ಕವನ್ನು ಒದಗಿಸಿ, ದೈನಂದಿನ ಪ್ರಯಾಣವನ್ನು ಸುಗಮಗೊಳಿಸಲಿದೆ.

Edited By : Nirmala Aralikatti
PublicNext

PublicNext

06/05/2026 04:41 pm

Cinque Terre

3.18 K

Cinque Terre

0