ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಾಫಿನಾಡ ರೈತರಿಗೆ ಭೂ ಸಂಕಷ್ಟ! ಅನ್ನದಾತರ ಬದುಕಿನ ಮೇಲೆ ಅಧಿಕಾರಿಗಳ 'ಬ್ರಹ್ಮಾಸ್ತ್ರ'

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ಕಡೂರು ತಾಲೂಕಿನ ಮೂರು ಸಾವಿರಕ್ಕೂ ಹೆಚ್ಚು ರೈತ ಕುಟುಂಬಗಳು ತಮ್ಮ ಸಾಗುವಳಿ ಭೂಮಿಯ ಹಕ್ಕಿಗಾಗಿ ಕಾನೂನು ಹೋರಾಟಕ್ಕಿಳಿದಿವೆ. ಈ ಹಿಂದೆ ಅಕ್ರಮ-ಸಕ್ರಮ ಯೋಜನೆಯಡಿ ಮಂಜೂರಾಗಿದ್ದ ಸಾಗುವಳಿ ಚೀಟಿಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಏಕಾಏಕಿ ರದ್ದುಪಡಿಸಿರುವುದನ್ನು ವಿರೋಧಿಸಿ 'ರೈತ ಹಿತರಕ್ಷಣಾ ವೇದಿಕೆ'ಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ಈ ಭೂಮಿಯನ್ನು ನಂಬಿ ಜೀವನ ನಡೆಸುತ್ತಿರುವ ಸಣ್ಣ ರೈತರು, ಅಲ್ಪಸಂಖ್ಯಾತರು ಈ ನಿರ್ಧಾರದಿಂದ ಕಂಗಾಲಾಗಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದರೂ ಕಂದಾಯ ದಾಖಲೆಗಳಲ್ಲಿ ರೈತರ ಹೆಸರನ್ನು ತೆಗೆದು 'ಸರ್ಕಾರಿ' ಎಂದು ನಮೂದಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದಾಗಿ ರೈತರಿಗೆ ಬ್ಯಾಂಕ್ ಸಾಲ ಸೌಲಭ್ಯ, ಬೆಳೆ ಹಾನಿ ಪರಿಹಾರ ಹಾಗೂ ರಸಗೊಬ್ಬರದ ಸಬ್ಸಿಡಿಗಳು ಸಿಗದೆ ಸಂಕಷ್ಟ ಎದುರಾಗಿದೆ. ಕೂಡಲೇ ಪಹಣಿಗಳಲ್ಲಿನ ದೋಷಗಳನ್ನು ಸರಿಪಡಿಸಿ, ಯಥಾಸ್ಥಿತಿಯನ್ನು ಕಾಪಾಡುವಂತೆ ಹಾಗೂ ರೈತರ ಜೀವನೋಪಾಯಕ್ಕೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿ ಬಂದಿದೆ.

Edited By :
PublicNext

PublicNext

06/05/2026 04:51 pm

Cinque Terre

838

Cinque Terre

0

ಸಂಬಂಧಿತ ಸುದ್ದಿ