ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಶಾಸಕ ಜೀವರಾಜ್ ಪ್ರಮಾಣವಚನ ಸ್ವೀಕಾರಕ್ಕೆ ಯಾವುದೇ ತಡವಾಗಿಲ್ಲ, ತಡೆ ಮಾಡುವುದೂ ಇಲ್ಲ- ಯು.ಟಿ. ಖಾದರ್

ಮಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಾಗಿ ಜೀವರಾಜ್ ಅವರಿಗೆ ಪ್ರಮಾಣವಚನ ಸ್ವೀಕಾರಕ್ಕೆ ವಿಧಾನಸಭೆಯ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಬಿಜೆಪಿ ಆರೋಪ ಮಾಡುತ್ತಿರುವ ವಿಚಾರದಲ್ಲಿ ಮಂಗಳೂರಿನಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯಿಸಿ ಶಾಸಕ ಜೀವರಾಜ್ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ಯಾವುದೇ ರೀತಿಯ ತಡವಾಗಿಲ್ಲ, ತಡೆ ಮಾಡೋದು ಸಹ ಇಲ್ಲ ಎಂದರು.

ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆ ಬಲಿಷ್ಠವಾಗಬೇಕಾದರೆ ವಿಶ್ವಾಸದಲ್ಲಿ ನಡೆಯಬೇಕು. ವಿಶ್ವಾಸ ಇಲ್ಲದಿದ್ದರೆ ಅದು ಸಾಧ್ಯವಿಲ್ಲ ನಾವು ಯಾವುದೇ ತಡ ಮಾಡಿಲ್ಲ. ನಾನು ಬೆಂಗಳೂರಿನಲ್ಲಿದ್ದಾಗ ಯಾರೂ ನನ್ನನ್ನು ಭೇಟಿ ಆಗಿಲ್ಲ ಎಂದರು.

ನಿನ್ನೆ ಸಮಯ ಬೇಕೆಂದು ಅರ್ಜಿ ಕೊಟ್ಟಿದ್ದಾರೆ. ಇದು ತಾಂತ್ರಿಕ ವಿಚಾರವಾದ್ದರಿಂದ ಅಭಿಪ್ರಾಯ ಪಡೆಯಬೇಕು. ಸಂವಿಧಾನ ಮತ್ತು ಕಾನೂನಿನಡಿ ಅವಕಾಶ ಕೊಡಲೇಬೇಕು. ಸರ್ಕಾರದ ಕಾನೂನು ಹೋರಾಟದಲ್ಲಿ ನನಗೆ ಸಂಬಂಧವಿಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಾನು ಕಾರ್ಯ ನಿರ್ವಹಿಸಬೇಕು ಎಂದರು.

ಈ ವಿಚಾರದಲ್ಲಿ ಆತುರ ಸಂಶಯ ಒಳ್ಳೆಯದಲ್ಲ. ಗವರ್ನರ್ ಕರೆ ಮಾಡಿ ಮಾತನಾಡಿದ್ದಾರೆ ಯಾವಾಗ, ಎಲ್ಲಿ, ಯಾರು ತಪ್ಪು ಮಾಡಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಯು.ಟಿ. ಖಾದರ್ ಹೇಳಿದರು.

Edited By : Manjunath H D
PublicNext

PublicNext

06/05/2026 05:01 pm

Cinque Terre

1.8 K

Cinque Terre

0

ಸಂಬಂಧಿತ ಸುದ್ದಿ