ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡುವ ವಿಚಾರದಲ್ಲಿ ಶಾಸಕ ಅರವಿಂದ ಬೆಲ್ಲದ ಅವರು ಧಾರವಾಡದ ಜನತೆಗೆ ದ್ರೋಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಆರೋಪಿಸಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಸರ್ಕಾರ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆ ಮಾಡಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿತ್ತು. ಆಗ ಇದೇ ಶಾಸಕ ಅರವಿಂದ ಬೆಲ್ಲದ ಅವರು ಧಾರವಾಡದ ತುಂಬ ಪ್ರತ್ಯೇಕ ಮಹಾನಗರ ಪಾಲಿಕೆ ತಂದದ್ದು ತಾವೇ ಎಂದು ದೊಡ್ಡ ದೊಡ್ಡ ಬ್ಯಾನರ್‌ಗಳನ್ನು ಹಾಕಿಸಿ ಪ್ರಚಾರ ತೆಗೆದುಕೊಂಡು ಈಗ ಇದೇ ಪ್ರತ್ಯೇಕ ಪಾಲಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಅವರು ಧಾರವಾಡ ಜನತೆಗೆ ಮಾಡಿದ ದೊಡ್ಡ ದ್ರೋಹವಾಗಿದೆ ಎಂದರು.
ಮೂರು ದಿನಗಳ ಅವಧಿಯಲ್ಲಿ ರಾಜ್ಯಪಾಲರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು. ಧಾರವಾಡದ ಜನತೆಯನ್ನು ಕರೆದು ಮಾತನಾಡಬೇಕು. ಇಲ್ಲದೇ ಹೋದರೆ ಧಾರವಾಡ ಬಂದ್‌ಗೆ ನಾವು ಕರೆ ನೀಡುತ್ತೇವೆ ಎಂದು ಎಚ್ಚರಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/05/2026 05:13 pm
LOADING...