ಬಾರ್ಕೂರು: ಐತಿಹಾಸಿಕ ಬಾರ್ಕೂರಿನ ಕೋಟೆಕೆರೆ ಹಾಗೂ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ ಪಡಿಸಲು ಸಮಗ್ರ ನೀಲನಕ್ಷೆ ಮತ್ತು ಅಂದಾಜುಪಟ್ಟಿ ಸಲ್ಲಿಸುವಂತೆ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ಬಾರ್ಕೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ದೇವಸ್ಥಾನದ ಆವರಣ ಮತ್ತು ಕೆರೆಯನ್ನು ವೀಕ್ಷಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ದೇವಸ್ಥಾನ ಮತ್ತು ಕೆರೆಯ ಪಾರಂಪರಿಕ ಸೌಂದರ್ಯವನ್ನು ಉಳಿಸಿಕೊಂಡೇ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದ ಸಚಿವರು, ಅಭಿವೃದ್ಧಿ ಕಾಮಗಾರಿಗಳ ಕುರಿತು ಕೂಡಲೇ ವರದಿ ಸಲ್ಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಐತಿಹಾಸಿಕ ಸೂರಾಲು ಅರಮನೆಯನ್ನು ಶೀಘ್ರವಾಗಿ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
PublicNext
06/05/2026 05:13 pm
LOADING...