ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'IPL ಫೈನಲ್ ಸ್ಥಳಾಂತರಕ್ಕೂ ಶಾಸಕರಿಗೆ ಉಚಿತ ಟಿಕೆಟ್‌ಗೂ ಯಾವುದೇ ಸಂಬಂಧವಿಲ್ಲ' - ಡಿಕೆಶಿ

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿದ ನಿರ್ಧಾರದ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಸ್ಥಳಾಂತರಕ್ಕೂ ಶಾಸಕರಿಗೆ ಉಚಿತ ಟಿಕೆಟ್ ವಿತರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, "ಅಹಮದಾಬಾದ್‌ನಲ್ಲಿ ದೊಡ್ಡ ಕ್ರೀಡಾಂಗಣವಿರುವುದರಿಂದ, ಹೆಚ್ಚಿನ ಸಂಖ್ಯೆಯ ಅಭಿಮಾನಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಅಲ್ಲಿಗೆ ಸ್ಥಳಾಂತರಿಸಿರಬಹುದು. ಶಾಸಕರಿಗೆ ಟಿಕೆಟ್ ವಿತರಣೆ ಮತ್ತು ಅಂತಿಮ ಪಂದ್ಯದ ಸ್ಥಳಾಂತರಕ್ಕೂ ಯಾವುದೇ ಸಂಬಂಧವಿಲ್ಲ. ಶಾಸಕರಿಗೆ ಶೇ 50ರಷ್ಟು ಟಿಕೆಟ್‌ಗಳನ್ನು ಬೇರೆ ಪಂದ್ಯಗಳಿಗೆ ಮೀಸಲಿಡಲಾಗುತ್ತದೆ" ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

06/05/2026 05:35 pm

Cinque Terre

5.31 K

Cinque Terre

0

ಸಂಬಂಧಿತ ಸುದ್ದಿ