ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುವಾಹಟಿ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆ

ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಸಂಪುಟ ಸಚಿವರೊಂದಿಗೆ ಬುಧವಾರ ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯಪಾಲರು ಶರ್ಮಾ ಹಾಗೂ ಸಂಪುಟ ಸಚಿವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ರಾಜ್ಯಪಾಲರು ಹಿಮಂತ ಬಿಸ್ವಾ ಶರ್ಮಾ ಅವರಿಗೆ ಸೂಚಿಸಿದ್ದಾರೆ ಎಂದು ಲೋಕಭವನ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮೇ 12ರಂದು ನಡೆಯುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಪಕ್ಷದ ಮೂಲಗಳ ಪ್ರಕಾರ, ಶರ್ಮಾ ಅವರೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಕುರಿತು ಮಾತನಾಡಿದ ಶರ್ಮಾ, ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ದಿನಾಂಕವನ್ನು ಕೇಂದ್ರ ವೀಕ್ಷಕ ಜೆಪಿ ನಡ್ಡಾ ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಭೆಯಲ್ಲಿ ಮುಂದಿನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ, ಅವರೇ ಹೊಸ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗುವ ಸಾಧ್ಯತೆಯಿದೆ ಎಂದೂ ಹೇಳಿದ್ದಾರೆ.

Edited By :
PublicNext

PublicNext

06/05/2026 05:43 pm

Cinque Terre

7.05 K

Cinque Terre

0

ಸಂಬಂಧಿತ ಸುದ್ದಿ