ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಮುಖಂಡ ಜಗದೀಶ್ ಹಿರೇಮನಿ ನಿಧನಕ್ಕೆ ಕೇಂದ್ರ ಸಚಿವ ಜೋಶಿ ಸಂತಾಪ

ಹುಬ್ಬಳ್ಳಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ (SIR) ರಾಜ್ಯ ಸಂಚಾಲಕರಾಗಿ, ಕರ್ನಾಟಕ ಬಿಜೆಪಿಯ ರಾಜ್ಯ ಮಾಜಿ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯರಾಗಿ ಸಫಾಯಿ ಕರ್ಮಚಾರಿಗಳ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಿದ್ದ ಜಗದೀಶ್ ಹಿರೇಮನಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು ಕಂಬನಿ ಮಿಡಿದಿದ್ದಾರೆ.

ಜೋಶಿ ಅವರ ಸಂತಾಪದ ಬರಹ ಹೀಗಿದೆ..

"ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ (SIR) ರಾಜ್ಯ ಸಂಚಾಲಕರಾಗಿ, ಕರ್ನಾಟಕ ಬಿಜೆಪಿಯ ರಾಜ್ಯ ಮಾಜಿ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯರಾಗಿ ಸಫಾಯಿ ಕರ್ಮಚಾರಿಗಳ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಿದ್ದ ಶ್ರೀ ಜಗದೀಶ್ ಹಿರೇಮನಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಆಘಾತವಾಗಿದೆ".

"ವಿದ್ಯಾರ್ಥಿ ಪರಿಷತ್, ಸಂಘ ಪರಿವಾರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತ, ಸಾಮಾಜಿಕ ನ್ಯಾಯದ ಪರವಾಗಿದ್ದ ಅವರ ಧ್ವನಿ ಇಂದು ಮೌನವಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬ ವರ್ಗದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ".

ಈ ರೀತಿ ಬರೆದುಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಜಗದೀಶ್ ಹಿರೇಮನಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Edited By : Nagaraj Tulugeri
PublicNext

PublicNext

06/05/2026 06:53 pm

Cinque Terre

6.12 K

Cinque Terre

0

ಸಂಬಂಧಿತ ಸುದ್ದಿ