ವಿಜಯಪುರ: ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿರುವ ಸ್ಥಳಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ. ಆನಂದ ಕೆ., ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸಚಿವರಿಗೆ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಘಟನೆಯಲ್ಲಿ ಗುರುನಾಥ ಬಡಿಗೇರ ತಾಯಿ ಶಾಂತಾಬಾಯಿ ಮತ್ತು ಮಗ ವೀರೇಶ(10) ಮತ್ತೊಂದು ಮನೆಯಲ್ಲಿ ಮಲಗಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪರಿಹಾರ ಘೋಷಣೆ: ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ, ಈ ದುರ್ಘಟನೆ ನಡೆಯಬಾರದಿತ್ತು. ಆದರೆ, ವಿಧಿಯಾಟಕ್ಕೆ ಬಲಿಯಾಗಿದ್ದಾರೆ. ಸಾವಿಗೀಡಾದ ನಾಲ್ಕು ಜನರ ಕುಟುಂಬಕ್ಕೆ ತಲಾ 5 ಲಕ್ಷದಂತೆ ಒಟ್ಟು 20 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಮತ್ತು ಬದುಕುಳಿದಿರುವ ಬಾಲಕ ವೀರೇಶ ಬಡಿಗೇರ ವಿದ್ಯಾಭ್ಯಾಸಕ್ಕೆ ನೆರವು ನೀಡಲಾಗುವುದು. ಪರಿಹಾರದ ಹಣವನ್ನು ಬಾಲಕನ ಹೆಸರಿನಲ್ಲಿ ಬ್ಯಾಂಕಿನಲ್ಲಿ ಠೇವಣಿ ಇಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ವೇಳೆ ಸಿಂದಗಿ ಶಾಸಕ ಅಶೋಕ ಮನಗೂಳಿ, ಮಾಜಿ ಶಾಸಕ ರಮೇಶ ಭೂಸನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
PublicNext
15/05/2026 06:45 pm
LOADING...