ವಿಜಯಪುರ : ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಯಿಂದ ಹತ್ತಾರು ಎಕರೆ ಪ್ರದೇಶದ ಬಾಳೆ ಬೆಳೆ ಸಂಪೂರ್ಣ ನೆಲಕಚ್ಚಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮಸೂತಿ ಗ್ರಾಮದಲ್ಲಿ ಸುಮಾರು 10 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರೈತರ ಬಾಳೆ ಹಾನಿಯಾಗಿದೆ.ಬಾಳೆ ಗಿಡಗಳು ನೆಲಕ್ಕುರುಳಿರುವುದರಿಂದ ಕೊಯ್ಲಿಗೆ ಬಂದಿದ್ದ ಫಸಲು ಹಾನಿಗೊಳಗಾಗಿದೆ.
ಬೇಸಿಗೆಯ ತೀವ್ರತೆಯ ನಡುವೆಯೂ ರೈತರು ಬೋರ್‌ವೆಲ್ ಹಾಗೂ ಬಾವಿಗಳ ಮೂಲಕ ನೀರು ಪೂರೈಕೆ ಮಾಡಿ ಬೆಳೆ ಉಳಿಸಿಕೊಳ್ಳಲು ಸಾಕಷ್ಟು ಹಣ ಖರ್ಚು ಮಾಡಿದ್ದರು. ರಸಗೊಬ್ಬರ, ಕೂಲಿ ಕಾರ್ಮಿಕರ ವೆಚ್ಚ ಸೇರಿದಂತೆ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿದ್ದ ರೈತರಿಗೆ ಈಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
PublicNext
16/05/2026 11:08 am
LOADING...