ಮೊಳಕಾಲ್ಮೂರು: ಕಳೆದ ರಾತ್ರಿ ಗುಡುಗು, ಮಿಂಚು, ಬಿರುಗಾಳಿ ಸಹಿತವಾಗಿ ಪಟ್ಟಣ ವ್ಯಾಪ್ತಿಯ ಎದ್ದಲ ಬೊಮ್ಮಯ್ಯನಹಟ್ಟಿ ಗ್ರಾಮದಲ್ಲಿ ಭಾರೀ ಮಳೆಯಾಗಿ ಸಾಕಷ್ಟು ಅನಾಹುತ ಸಂಭವಿಸಿದೆ.
ಮೊಳಕಾಲ್ಮೂರು ತಾಲ್ಲೂಕಿನ ಎದ್ದಲ ಬೊಮ್ಮಯ್ಯನಹಟ್ಟಿ ಗ್ರಾಮದಲ್ಲಿ ತಡರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.
ಬಿರುಗಾಳಿ ಅಬ್ಬರಕ್ಕೆ 15 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದಿದ್ದು ಇಡೀ ರಾತ್ರಿ ವಿದ್ಯುತ್ ಸಂಪರ್ಕ ಕಡಿತ, ಸಾರ್ವಜನಿಕರು ಹೈರಾಣಾಗಿದ್ದಾರೆ. ಗ್ರಾಮದಲ್ಲಿ 10 ಕ್ಕೂ ಹೆಚ್ಚು ಮಂದಿ ಮನೆಗಳ ಶೀಟ್ ಹಾರಿ ಹೋಗಿವೆ. ಇದರಿಂದಾಗಿ ಇಡೀ ರಾತ್ರಿ ಕತ್ತಲೆಯಲ್ಲಿ ಮಹಿಳೆಯರು, ಮಕ್ಕಳು ಕಾಲ ಕಳೆಯುವಂತಾಗಿದೆ.
ಗ್ರಾಮದ ಹಲವು ಕಡೆ ಬೃಹತ್ ಗಾತ್ರದ ಮರಗಳು ನೆಲಕ್ಕುರುಳಿವೆ,ಮರ ಬಿದ್ದು ಎರಡು ಆಟೋ, ಪ್ಪೇಸ್ವಾಮಿ, ಮೂರ್ತಿ, ತಿಪ್ಪಯ್ಯ ಅವರಿಗೆ ಸೇರಿದ ಮೂರು ಬೈಕ್ ಜಖಂಗೊಂಡಿವೆ.
ಗಾಳಿಯ ರಭಸಕ್ಕೆ ರಾಷ್ಟ್ರೀಯ ಹೆದ್ದಾರಿಗೆ ಬೃಹತ್ ಗಾತ್ರದ ಮರಗಳು ಧರೆಗುರುಳಿದ ಪರಿಣಾಮ ರಾಯದುರ್ಗ- ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು,ಇಡೀ ರಾತ್ರಿ ಸುರಿದ ಮಳೆಗೆ ಅಕ್ಷರಶಃ ಊರಿನ ಗ್ರಾಮಸ್ಥರು ತತ್ತರಿಸಿ ಹೋಗಿದ್ದಾರೆ.
PublicNext
19/05/2026 01:48 pm
LOADING...