ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ನಗರ ಪಂಚಾಯತ್ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿಗಳ ಆಹ್ವಾನ

ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಾರ್ಷಿಕ ರೂ. 2.50 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಆದಾಯ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬದವರಿಗೆ 2026-27ನೇ ಸಾಲಿನ ಶೇ. 24.10% ಎಸ್.ಎಫ್.ಸಿ ಮತ್ತು ನಗರ ಪಂಚಾಯತ್ ನಿಧಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಯೋಜನೆಗೆ ಕಾಯ್ದಿರಿಸಿದ ಮೊತ್ತದಲ್ಲಿ ವಿದ್ಯಾರ್ಥಿ ವೇತನ, ಮನೆ ದುರಸ್ತಿಗೆ ಹಾಗೂ ಶೌಚಾಲಯ ದುರಸ್ಥಿ ಮತ್ತು ಶೇಕಡ 7.25 ರ ಬಡ ಜನರ ಕಲ್ಯಾಣ ಕಾರ್ಯಕ್ರಮ ನಿಧಿಯಡಿ ಶೌಚಾಲಯ ದುರಸ್ಥಿ ಹಾಗೂ ವಿದ್ಯಾರ್ಥಿ ವೇತನ, ಮತ್ತು ಶೇಕಡ 5 ರ ಅಂಗವಿಕಲ ಕಲ್ಯಾಣ ಕಾರ್ಯಕ್ರಮದಡಿ ಅಂಗವಿಕಲರನ್ನು ಪೋಷಿಸುವವರಿಗೆ ಪೋಷಣಾ ಭತ್ಯೆ ಸಹಾಯಧನ ಮತ್ತು ವಿಶೇಷ ಚೇತನ ವಿದ್ಯಾರ್ಥಿ ಫಲಾನುಭವಿಗಳಿಗೆ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.

ಈ ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26.06.2026. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮುಲ್ಕಿ ನಗರ ಪಂಚಾಯತ್ ಕಚೇರಿಯನ್ನು ಸಂಪರ್ಕಿಸುವಂತೆ ಮುಖ್ಯಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Edited By : PublicNext Desk
Kshetra Samachara

Kshetra Samachara

19/05/2026 09:23 pm

Cinque Terre

790

Cinque Terre

0

ಸಂಬಂಧಿತ ಸುದ್ದಿ