ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಪೆಟ್ರೋಲ್ ಡೀಸೆಲ್ ಗಾಗಿ ವಾಹನ ಸವಾರರು ಮುಗಿಬಿದ್ದಿದ್ದಾರೆ.
ಹೌದು..! ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮ ಪೆಟ್ರೋಲ್ ಕೊರತೆ ಉಂಟಾಗಿದ್ದು ಪಟ್ಟಣದಲ್ಲಿರುವ ಏಳೆಂಟು ಪಂಪ್‌ಗಳಲ್ಲಿ ಪೆಟ್ರೋಲ್ ಡೀಸೆಲ್ ಖಾಲಿಯಾಗಿದ್ದು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರುವ ಇಂಡಿಯನ್ ಪೆಟ್ರೋಲ್ ಪಂಪ್‌ನಲ್ಲಿ ಜನ ಪೆಟ್ರೋಲ್ ಗಾಗಿ ಮುಗಿಬಿದ್ದಿದ್ದಾರೆ.
ಇನ್ನೂ ಕಳೆದ ಎರಡು ಮೂರು ದಿನಗಳಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದರೂ ಜನ ಪೆಟ್ರೋಲ್ ಡೀಸೆಲ್ ಗಾಗಿ ಮುಗಿಬಿದ್ದಿದ್ದು ಸರತಿ ಸಾಲಿನಲ್ಲಿ ನಿಂತು ಪೆಟ್ರೋಲ್ ಡೀಸೆಲ್ ತುಂಬಿಸಿಕೊಳ್ಳುತ್ತಿದ್ದಾರೆ.
ಇನ್ನೂ ಯಾವುದೇ ಗಲಾಟೆ ಸಂಭವಿಸಬಾರದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿಗಳು ಪಂಪ್‌ನಲ್ಲಿ ಭದ್ರತೆ ಒದಗಿಸಿದ್ದಾರೆ.
ಇನ್ನೂ ಪಟ್ಟಣದ ಎಚ್ ಪಿ ಸೇರಿದಂತೆ ಬಹುತೇಕ ಪಂಪ್‌ಗಳಲ್ಲಿ ಪೆಟ್ರೋಲ್ ಡೀಸೆಲ್ ಖಾಲಿಯಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
PublicNext
19/05/2026 10:32 pm
LOADING...